Friday, October 25, 2024
Homeಬೆಂಗಳೂರುಬೆಂಗಳೂರಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣದಲ್ಲಿವೆ : ಬಿ.ದಯಾನಂದ

ಬೆಂಗಳೂರಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣದಲ್ಲಿವೆ : ಬಿ.ದಯಾನಂದ

Crime cases are under control in Bangalore : B. Dayananda

ಬೆಂಗಳೂರು, ಅ.25– ಅಪರಾಧಗಳ ತಡೆ ಮತ್ತು ಪತ್ತೆ ಹಚ್ಚುವುದು ಪೊಲೀಸರ ಮೂಲಭೂತ ಕರ್ತವ್ಯವಾಗಿದೆ ಎಂದು ನಗರ ಪೊಲೀಸ್‌‍ ಆಯುಕ್ತ ದಯಾನಂದ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಅಪರಾಧಗಳು ನಿಯಂತ್ರಣದಲ್ಲಿವೆ. ಅಂಕಿ- ಅಂಶಗಳ ಪ್ರಕಾರ ಅಪರಾಧಗಳ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವಿವರಿಸಿದರು.

ಅಪರಾಧಗಳು ನಡೆಯದಂತೆ ತಡೆಗಟ್ಟುವುದು ನಮ ಕರ್ತವ್ಯವಾಗಿದೆ. ಆರೋಪಿಗಳಿಂದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖವಾಗಿ ವಾಹನಗಳ್ಳತನ, ಮನೆಗಳ್ಳತನದ ಸ್ವತ್ತನ್ನು ಕೆಲವು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಈಗಾಗಲೇ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಸಾರ್ವಜನಿಕರು ಕಾರುಗಳಲ್ಲಿ ಬೆಲೆಬಾಳುವ ವಸ್ತುಗಳು, ಚಿನ್ನಾಭರಣ ಹಾಗೂ ಹೆಚ್ಚಿನ ಹಣವನ್ನು ಕಾಣುವ ಹಾಗೆ ಇಡಬಾರದು. ಕಾರಿನಿಂದ ಇಳಿದು ಹೋಗಬೇಕಾದರೆ ಅಂತಹ ವಸ್ತುಗಳನ್ನು ತಮ ಜೊತೆಯಲ್ಲೇ ತೆಗೆದುಕೊಂಡು ಹೋಗಬೇಕು. ಇಲ್ಲದಿದ್ದರೆ ಸುರಕ್ಷಿತವಾಗಿ ಇಡಬೇಕು ಎಂದು ಸಲಹೆ ನೀಡಿದರು.

ಹೆಣ್ಣೂರು ಠಾಣಾ ವ್ಯಾಪ್ತಿಯ ಬಾಬಾಸಾಹೇಬ್‌ ಪಾಳ್ಯದಲ್ಲಿ ಕಟ್ಟಡ ಕುಸಿತದಲ್ಲಿ 9 ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸದ್ಯದಲ್ಲೇ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುವುದು ಎಂದು ಅವರು ಹೇಳಿದರು.

RELATED ARTICLES

Latest News