Friday, May 3, 2024
Homeರಾಜ್ಯಮಾಜಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಸೂಚನೆ

ಮಾಜಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಸೂಚನೆ

ಬೆಂಗಳೂರು,ಮಾ.26- ವಿಧಾನಸಭೆಯ ಮಾಜಿ ಉಪ ಸಭಾಪತಿ ಹಾಗೂ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಾರೆಡ್ಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯದ ಆದೇಶ ನೀಡಿದೆ.

ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಲಂ 499ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಡಿಷನಲ್ ಚೀಫ್ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಜೆ. ಪ್ರೀತ್ ಅವರು ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗಣೇಶ ಮಂದಿರ ವಾರ್ಡ್ ವ್ಯಾಪ್ತಿಯ ಬನಗಿರಿ ನಗರಕ್ಕೆ ಸೇರಿರುವ ಕತ್ರಿಗುಪ್ಪೆ ಸರ್ವೇ ನಂ. 125 ಮತ್ತು 126 ಕ್ಕೆ ಸೇರಿರುವ ಸುಮಾರು 350 ಕೋಟಿ ಮೌಲ್ಯದ 4.31 ಎಕರೆ ವಿಸ್ತೀರ್ಣದ ಸರ್ಕಾರಿ ಸ್ವತ್ತಿಗೆ 41 ಮಂದಿ ಸರ್ಕಾರಿ ನೆಲಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸುವ ಯತ್ನ ನಡೆಸಿದ್ದರು.

ಈ ಸಂಬಂಧ ಲೋಕಾಯುಕ್ತ ಮತ್ತು ಬಿಎಂಟಿಎಫ್ನಲ್ಲಿ ದೂರುಗಳನ್ನು ಸಲ್ಲಿಸಲಾಗಿತ್ತು ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸದನ ಸಮಿತಿಯ ಅಧ್ಯಕ್ಷರೂ ಆಗಿದ್ದ ಕೃಷ್ಣಾ ರೆಡ್ಡಿ ಅವರು ಆರೋಪಿಗಳ ವಿರುದ್ಧ ಕ್ರಮಕ್ಕೆ ಆದೇಶಿಸುವ ಬದಲಾಗಿ, ಪಾಲಿಕೆಯ ಸ್ವತ್ತನ್ನು ಪಾಲಿಕೆಯ ವಶಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದ ಅಧಿಕಾರಿಯ ವಿರುದ್ಧವೇ ನಿರ್ಣಯ ತೆಗೆದುಕೊಂಡಿದ್ದರು.

ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಲೋಕಾಯುಕ್ತ ಮತ್ತು ಬಿಎಂಟಿಎಫ್ತನಿಖಾ ಸಂಸ್ಥೆಗಳಲ್ಲಿ ರಮೇಶ್ ಅವರು ದೂರುಗಳನ್ನು ದಾಖಲಿಸಿದ್ದರು. ಈ ಸಂಬಂಧ ಅವರ ಬಗ್ಗೆ ಕೃಷ್ಣಾ ರೆಡ್ಡಿಯವರು ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ರಮೇಶ್ ಅವರು ಕೃಷ್ಣಾ ರೆಡ್ಡಿಯವರ ವಿರುದ್ಧ ಖಾಸಗಿ ದೂರನ್ನು ದಾಖಲಿಸಿದ್ದರು. ನ್ಯಾಯಾಲಯದ ಆದೇಶದಂತೆ ಕೃಷ್ಣಾ ರೆಡ್ಡಿಯವರು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿ ಜಾಮೀನು ಪಡೆದುಕೊಳ್ಳಬೇಕಿದೆ.

RELATED ARTICLES

Latest News