Friday, November 22, 2024
Homeರಾಜ್ಯಕಾಂಗ್ರೆಸ್ ಸರ್ಕಾರದಿಂದ ದಸರಾಗೂ ಕಳಂಕ : ಸಿ.ಟಿ.ರವಿ

ಕಾಂಗ್ರೆಸ್ ಸರ್ಕಾರದಿಂದ ದಸರಾಗೂ ಕಳಂಕ : ಸಿ.ಟಿ.ರವಿ

ಬೆಂಗಳೂರು, ಅ.15- ಹಿರಿಯ ಕಲಾವಿದರ ಬಳಿಯೇ ಕಮಿಷನ್ ಕೇಳುತ್ತಿರುವ ಕಾಂಗ್ರೆಸ್ ಶೇ.60ರಷ್ಟು ಸರ್ಕಾರವಾಗಿದೆ ಎಂದು ಆರೋಪಿಸಿರುವ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಗುತ್ತಿಗೆದಾರರ ಬಳಿ ಕೋಟಿ ಕೋಟಿ ಹಣ ಪತ್ತೆಯಾಗುತ್ತಿರುವ ಪ್ರಕರಣವನ್ನು ಸಿಬಿಐ ತನಿಖಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕøತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ.60 ಲಂಚ ಕೇಳಿದಂತಾಗಿದೆ. ಹಿರಿಯ ಕಲಾವಿದರ ಬಳಿಯೇ ಶೇ.60 ಲಂಚ ಕೇಳುವುದಾದರೆ ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಬೇರೊಂದಿಲ್ಲ. ಇಷ್ಟು ಮಾತ್ರವಲ್ಲ; ಈ ಸರಕಾರ ಕಲಾವಿದರನ್ನೂ ಬಿಡುತ್ತಿಲ್ಲ; ಇನ್ನು ಬೇರೆಯವರನ್ನು ಬಿಡುವರೇ ಎಂದು ಪ್ರಶ್ನಿಸಿದರು.

ಗಾಜಾದಲ್ಲಿ ಆಹಾರ, ನೀರು ಇಲ್ಲದೆ 2.3 ಮಿಲಿಯನ್ ಜನರ ನರಳಾಟ

ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ ಕೇವಲ ಗುತ್ತಿಗೆದಾರರಿಗೆ, ಸರಕಾರಿ ಯೋಜನೆಗಳಿಗೆ ಸೀಮಿತವಾಗಿಲ್ಲ. ಅದು ಕಲಾವಿದರ ಗೌರವಧನದ ವರೆಗೂ ಕೈಚಾಚಿಬಿಟ್ಟಿದೆ. ಇದು ದುರಂತದ ಸಂಗತಿ ಮಾತ್ರವಲ್ಲ. ಸಾಂಸ್ಕøತಿಕ ಅಧಃಪತನದತ್ತ ಇವರು ರಾಜ್ಯವನ್ನು ಒಯ್ಯುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿಗಳು ನಮ್ಮದು ಭ್ರಷ್ಟಾಚಾರರಹಿತ ಆಡಳಿತ ಎನ್ನುತ್ತಾರೆ. ಅಬ್ಬರಿಸಿ ಬೊಬ್ಬಿರಿವ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಅವರ ಮೂಗಿನ ಕೆಳಗೇ ಇದು ನಡೆಯುತ್ತಿದೆ. ಬೇರೆ ಜಿಲ್ಲೆಗಳಲ್ಲಿ ಇನ್ನು ಪರಿಸ್ಥಿತಿ ಹೇಗಿರಬಹುದು ಎಂಬ ಪ್ರಶ್ನೆ ಕಾಡುತ್ತಿದೆ. ಒತ್ತಡದ ಮೂಲಕ ಪ್ರಕರಣ ಮುಚ್ಚಿಹಾಕಲು ಮುಂದಾದುದು ಇನ್ನಷ್ಟು ನಾಚಿಕೆಗೇಡಿನ ಸಂಗತಿ ಎಂದರು.

ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ. ಹಿಂದೆ ನಮ್ಮ ಸರಕಾರದ ಮೇಲೆ ಆರೋಪ ಮಾಡುತ್ತಿದ್ದರು. ಈಗ ಗುತ್ತಿಗೆದಾರ ಅಂಬಿಕಾಪತಿ ಕರೋಡ್‍ಪತಿಯಾಗಿದ್ದಾರೆ. ಅವರ ಮನೆಯಲ್ಲಿ 42 ಕೋಟಿ, ಇನ್ನೊಬ್ಬ ಬಿಲ್ಡರ್ ಕೇತಮಾರನಹಳ್ಳಿ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ 40 ಕೋಟಿ, ಹೀಗೆ ಕೋಟಿ ಕೋಟಿ ಹೊರಕ್ಕೆ ಬರುತ್ತಿದೆ. ಇವರಿಬ್ಬರೂ ರಾಜ್ಯದ ನಂಬರ್ 1, ನಂಬರ್ 2 ಅವರ ಬೇನಾಮಿಗಳು ಎಂಬ ಮಾಹಿತಿ ನಮಗಿದೆ ಎಂದು ವಿವರ ನೀಡಿದರು. ಇದರ ಸಿಬಿಐ ತನಿಖೆ ಮಾಡಿ ಎಂದು ಆಗ್ರಹಿಸಿದರು.

ನಂಬರ್ 1, ನಂಬರ್ 2 ಅವರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ನೂರಾರು ಬೇನಾಮಿಗಳನ್ನು ನೇಮಿಸಿದ್ದಾರೆ. ಇಬ್ಬರು ಬೇನಾಮಿಗಳು ಮಾತ್ರ ಸಿಕ್ಕಿದ್ದಾರೆ. ಈ ಹಣವೇ ಬೇನಾಮಿಗಳ ನೇಮಕಕ್ಕೆ ಸಾಕ್ಷಿ. ಕರ್ನಾಟಕವನ್ನು ಇವರು ಎಟಿಎಂ ಮಾಡಿಕೊಂಡಿದ್ದಾರೆ. ಹಿಂದೆ ಗೋವಿಂದರಾಜು ಅವರ ಡೈರಿ ಇದಕ್ಕೆ ಸಾಕ್ಷಿ ಆಗಿತ್ತು. ಆರ್‍ಜಿ ಯಾರು, ಎಸ್‍ಜಿ ಯಾರು, ಎಷ್ಟೆಷ್ಟು ಕೊಟ್ಟಿದ್ದಾಗಿ ಡೈರಿ ಸಾಕ್ಷಿ ಕೊಟ್ಟಿತ್ತು ಎಂದು ಅವರು ತಿಳಿಸಿದರು.

ಸಿಎಂ ಕುರ್ಚಿಗೆ ಟವೆಲ್ ಹಾಕಿದವರೊಬ್ಬರು ಚುನಾವಣೆ ಖರ್ಚಿಗೆ 2 ಸಾವಿರ ಕೋಟಿ ಕೊಡುವುದಾಗಿ ಹೇಳಿದ ಮಾಹಿತಿ ಇದೆ. ಹಾಲಿ ಮುಖ್ಯಮಂತ್ರಿಗಳು ಕಷ್ಟಪಟ್ಟು ಅದರ ಅರ್ಧ ವ್ಯವಸ್ಥೆ ಮಾಡುವುದಾಗಿ ಹೇಳಿದ ಮಾಹಿತಿ ಸಿಕ್ಕಿದೆ. ಇದು ಒಳಗಿನ ಸುದ್ದಿ. ಸತ್ಯವನ್ನು ಅವರೇ ಹೇಳಬೇಕು. ಇದನ್ನು ನೋಡಿದರೆ ಬ್ರ್ಯಾಂಡ್ ಬೆಂಗಳೂರು ಎಂದರೆ ಭ್ರಷ್ಟ ಬೆಂಗಳೂರು ಎಂದು ಅರ್ಥವಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ, ಮತ್ತೆ 45 ಕೋಟಿ ರೂ. ಪತ್ತೆ!

ತನಿಖೆ ಆದರೆ ಸಂಗ್ರಹಿತ ಮೊತ್ತ, ನಂಬರ್ 1ರಿಂದ ಆದ ಸಂಗ್ರಹ, ನಂಬರ್ 2 ಸಂಗ್ರಹಿಸಿದ ಮೊತ್ತದ ವಿವರ ಹೊರಬರುತ್ತದೆ. ಅಂತರರಾಜ್ಯ ವಿಷಯವಾದ ಕಾರಣ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದರು.

ಐಟಿ ದಾಳಿ ಹಿಂದೆ ರಾಜಕೀಯ ಇರುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರೆ, ಎಲ್ಲ ಖಾತೆ ತಮ್ಮ ಕೈಯಲ್ಲಿ ಇರುವಂತೆ ವರ್ತಿಸುವ ಪ್ರಿಯಾಂಕ್ ಖರ್ಗೆಯವರು ದಾಳಿ ವಿರುದ್ಧ ಅಣಿಮುತ್ತು ಉದುರಿಸುತ್ತಾರೆ ಎಂದು ಟೀಕಿಸಿದರು. ಏಕ್ ತರಫ್ ಸೆ ಆಲೂ ಡಾಲ್‍ನ, ದೂಸ್‍ರಾ ತರಫ್ ಸೆ ಸೋನಾ ನಿಕಾಲ್‍ನ ಎಂಬಂತೆ ದುಡ್ಡು ತೆಗೆದಿದ್ದಾರಾ ಎಂದು ವ್ಯಂಗ್ಯವಾಡಿದರು.

ಅಬಕಾರಿ ಸುಂಕ, ವಿದ್ಯುತ್ ದರ, ಸ್ಟ್ಯಾಂಪ್ ಶುಲ್ಕ ಹೀಗೆ ಎಲ್ಲ ಬೆಲೆ ಏರಿಸಿದ ಬಳಿಕ ಬಾಕಿ ಬಿಲ್ ನೀಡಲು ನೀವು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದೀರಿ. ಬಹುಶಃ ಪಂಜಾಬ್ ಬಳಿಕ ಕರ್ನಾಟಕದ ಸಿಎಂ ಕೂಡ ತನ್ನ ರಾಜ್ಯ ದಿವಾಳಿ ಆಗುತ್ತಿದೆ ಎಂದು ಮುನ್ಸೂಚನೆ ಕೊಟ್ಟಿದ್ದಾರೆ. ಇಷ್ಟಾದರೂ ಇವರು ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ಕೊಡುವುದನ್ನು ನಿಲ್ಲಿಸಿಲ್ಲ ಎಂದು ಟೀಕಿಸಿದರು.

ಈ ಸರಕಾರ ವಸೂಲಿ ಸರಕಾರ ಎಂದು ಟ್ಯಾಗ್‍ಲೈನ್ ಕೊಟ್ಟರೆ ತಪ್ಪಾಗದು. ಹಾಗಾಗಿ ವಸೂಲಿಗೆ ಸಂಬಂಸಿ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ತಿಳಿಸಿದರು. ದೇಶ ಮತ್ತು ನಾಡಿನ ಜನತೆಗೆ ಅವರು ನಾಡಹಬ್ಬ ದಸರಾ ಶುಭಾಶಯ ಕೋರಿದರು. ವಿಧಾನ ಪರಿಷತ್ ಸದಸ್ಯ ಮತ್ತು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡ ಭಾಸ್ಕರ ರಾವ್ ಉಪಸ್ಥಿತರಿದ್ದರು.

RELATED ARTICLES

Latest News