Saturday, July 27, 2024
Homeರಾಜ್ಯಪೆನ್‌ಡ್ರೈವ್‌ ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಲು ಸಿ.ಟಿ.ರವಿ ಒತ್ತಾಯ

ಪೆನ್‌ಡ್ರೈವ್‌ ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಲು ಸಿ.ಟಿ.ರವಿ ಒತ್ತಾಯ

ಬೆಂಗಳೂರು,ಮೇ11-ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ನಡೆವಳಿಕೆಗಳ ಬಗ್ಗೆ ಅನುಮಾನ ಮೂಡುತ್ತಿದ್ದು, ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ನಡೆಸಿದ ಸಂಭಾಷಣೆಯನ್ನು ಬಿಡುಗಡೆ ಮಾಡಿದ ಮರು ಕ್ಷಣವೇ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದರೆ ಇದು ಏನು ಸೂಚಿಸುತ್ತದೆ ಎಂದು ಪ್ರಶ್ನೆ ಮಾಡಿದರು.

ಇನ್ನಷ್ಟು ಆಡಿಯೋ, ವಿಡಿಯೋಗಳನ್ನು ದೇವರಾಜೇಗೌಡ ಬಿಡುಗಡೆ ಮಾಡಬಹುದೆಂಬ ಆತಂಕದಿಂದಲೇ ಯಾರೋ ಒಬ್ಬರ ನಿರ್ದೇಶನದಂತೆ ಪೊಲೀಸರು ದೇವರಾಜೇಗೌಡ ಅವರನ್ನು ಬಂಧಿಸಿದ್ದಾರೆ. ಎಲ್ಲವೂ ಸರ್ಕಾರ ನಡೆಸುವವರ ನಿರ್ದೇಶನದ ಮೇಲೆ ನಡೆಯುತ್ತದೆ ಎಂದರೆ ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ ಇಲ್ಲ ಎಂದು ಆಕ್ಷೇಪಿಸಿದರು.

ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ ಇಲ್ಲವೇ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಬೇಕು. ಸಿಬಿಐ ಮೇಲೆ ನಂಬಿಕೆ ಇಲ್ಲದಿದ್ದರೆ ಚಿಂತೆ ಇಲ್ಲ ಕಡೆಪಕ್ಷ ನ್ಯಾಯಾಂಗದ ತನಿಖೆಗೆ ವಹಿಸಲು ಸಮಸ್ಯೆಯಾದರೂ ಏನು ಎಂದು ಪ್ರಶ್ನಿಸಿದರು.

ಇದು ಮೊದಲಿನಿಂದಲೂ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ ಎಂಬ ಅನುಮಾನ ಇತ್ತು. ಡಿ.ಕೆ.ಶಿವಕುಮಾರ್‌ ಜೊತೆ ಎಲ್‌ಆರ್‌ ಶಿವರಾಮೇಗೌಡ ನಡೆಸಿದ ಆಡಿಯೋ ಸಂಭಾಷಣೆ ಬಿಡುಗಡೆಯಾದ ಅರ್ಧಗಂಟೆಯಲ್ಲೇ ದೇವರಾಜೇಗೌಡ ಬಂಧನ ಸಾಕಷ್ಟು ಸಂಶಯಗಳಿಗೆ ಎಡೆ ಮಾಡಿಕೊಟ್ಟಿವೆ ಎಂದು ಹೇಳೀದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್‌ ಮಾತನಾಡಿ, ರಾಜ್ಯ ಸರ್ಕಾರದ ಜವಾಬ್ದಾರಿ. ಈ ರೀತಿ ಘಟನೆ ನಡೆಯುವ ಮೊದಲು ಗುಪ್ತಚರ ಇಲಾಖೆ ಸರ್ಕಾರದ ಗಮನಕ್ಕೆ ತರಬೇಕಿತ್ತು. ಇಂಟಲಿಜೆನ್ಸ್ ಫೆಲ್ಯೂರ್‌ ಆಗಿದೆ. ಫಲಿತಾಂಶ ಬಂದ ಹೆಣ್ಣು ಮಗು ತಲೆ ಕಡಿದು ಹತ್ಯೆಯಾಗಿದೆ. ಭ್ರೂಣ ಹತ್ಯೆ ಪ್ರಕರಣ ಮತ್ತೆ ಹೊರ ಬರುತ್ತಿವೆ. ಕರ್ನಾಟಕದಲ್ಲಿ ಕಾನೂನು ಸುವ್‌ಯವಸ್ಥೆ ಹಾಳಗಿದೆ ಎಂದರು.

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ರಾಷ್ಟ್ರ ಮಟ್ಟದಲ್ಲಿ ನಡೆದಿದೆ. ಮುಂದುವರೆಸಬೇಕೆ, ಬೇಡವೇ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

RELATED ARTICLES

Latest News