ಕಸ್ಟೋಡಿಯಲ್ ಡೆತ್ ಪ್ರಕರಣ ಸಿಐಡಿಗೆ ವರ್ಗಾವಣೆ

Social Share

ಬೆಳಗಾವಿ, ನ.12- ಗಾಂಜಾ ಪ್ರಕರಣ ದಲ್ಲಿ ಗ್ರಾಮಾಂತರ ಠಾಣೆ ಪೊಲೀಸರ ವಶದಲ್ಲಿದ್ದ ಆರೋಪಿ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಪಾಟೀಲï(45) ಮೃತಪಟ್ಟಿದ್ದು, ಪೊಲೀಸರ ದೌರ್ಜನ್ಯ ಆರೋಪ ಕೇಳಿಬಂದಿದೆ.

ಗಾಂಜಾ ಪ್ರಕರಣದಲ್ಲಿ ಬಸನಗೌಡ ಪಾಟೀಲïನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಬೆಲ್ಲದ ಬಾಗೇವಾಡಿಯಿಂದ ಬೆಳಗಾವಿಗೆ ಕರೆತಂದು ವಿಚಾರಣೆ ನಡೆಸಿದ್ದು, ಈ ವೇಳೆ ಬಸನಗೌಡ ಪಾಟೀಲ್ ಅಸ್ವಸ್ಥಗೊಂಡರು.

ಬಳಿಕ ಪೊಲೀಸರು ಬಸನಗೌಡ ಪಾಟೀಲïನನ್ನು ಮಾರ್ಗಮಧ್ಯೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ನಂತರ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾಗ ಮತ್ತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆತನನ್ನು ಬಿಮ್ಸï ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಬಸನಗೌಡ ಪಾಟೀಲ್ ಮೃತಪಟ್ಟಿದ್ದಾನೆ.

ಪೊಲೀಸರ ವಶದಲ್ಲಿದ್ದಾಗ ಬಸನಗೌಡ ಮೃತಪಟ್ಟಿರುವುದರಿಂದ ಕಸ್ಟೋಡಿಯಲ್ ಡೆತ್ ಪ್ರಕರಣ ದಾಖಲಾಗಿದೆ.ತನಿಖೆ ಸಿಐಡಿಗೆ: ಇನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ತಡರಾತ್ರಿ ಭೇಟಿ ನೀಡಿ ಮೃತ ಆರೋಪಿಯ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಪ್ರಕರಣವೊಂದರ ಸಂಬಂಧ ಬಸವನಗೌಡ ಪಾಟೀಲ್ ಎಂಬಾತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿತ್ತು. ಪೊಲೀಸ್ ವಶದಲ್ಲಿರುವ ಸಂದರ್ಭದಲ್ಲಿ ವಾಂತಿ, ಬೆವರು ಬಂದಿದೆ.

ತಕ್ಷಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಠಾಣೆಗೆ ಕರೆದುಕೊಂಡ ಬಂದ ಮೇಲೆ ವಾಂತಿ, ಬೆವರು ಜಾಸ್ತಿ ಆಗಿದೆ. ಹೀಗಾಗಿ ಬೆಳಗಾವಿ ಬಿಮ್ಸï ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದಯಾಘಾತವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ತಕ್ಷಣ ಇಸಿಜಿ ಮಾಡಿಸಿ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಿಲ್ಲ. ಬಿಮ್ಸï ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಸನಗೌಡ ಪಾಟೀಲ್ ಮೃತಪಟ್ಟಿದ್ದಾನೆ.
ತಾಂತ್ರಿಕವಾಗಿ ಇದು ಕಸ್ಟೋಡಿಯಲ್ ಡೆತ್ ಪ್ರಕರಣ ಎಂದು ಕೇಸು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಪ್ರಕರಣ ದಾಖಲಾಗಿದ್ದ ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿದೆ. ಯಾವುದೇ ತಪ್ಪು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಸ್ಟೋಡಿಯಲ್ ಡೆತ್ ಬಗ್ಗೆ ಸಿಐಡಿಯಿಂದ ಪ್ರಕರಣ ತನಿಖೆ ನಡೆಯಲಿದೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಸಾವಿನ ಸುತ್ತ ಅನುಮಾನದ ಹುತ್ತ: ಆರೋಪಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾದ ತಕ್ಷಣ ಚಿಕಿತ್ಸೆ ಕೊಡಿಸಿದ್ದರೆ ಅವರು ಬದುಕುಳಿಯುತ್ತಿದ್ದರು.

ಒಬ್ಬ ಆರೋಪಿಯನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಕೊಟ್ಟ ಬಳಿಕವೂ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರದೆ ತಡಮಾಡಿ ಮತ್ತೆ ಆರೋಗ್ಯ ಏರುಪೇರಾದ ಮೇಲೆ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ಸದ್ಯ ಆರೋಪಿ ಬಸನಗೌಡ ಪಾಟೀಲ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಪೊಲೀಸರ ತನಿಖೆ ನಂತರವಷ್ಟೇ ಸಾವು ಹೇಗಾಗಿದೆ ಎಂಬುದು ಗೊತ್ತಾಗಲಿದೆ.

Articles You Might Like

Share This Article