ಬೆಂಗಳೂರು, ಫೆ.17- ಸರ್ಕಾರಿ ವೆಬ್‍ಸೈಟ್‍ಗಳು, ಆನ್-ಲೈನ್ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ ದಿನದ 24 ಗಂಟೆಯೂ ಸೇವೆಯಲ್ಲಿರುವಂತೆ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಸೈಬರ್ ಸೆಕ್ಯುರಿಟಿ ಆಪರೇಷನ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್-2 ಯೋಜನೆ ಅಡಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ 125 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಯಲು ಹಾಗೂ ರಕ್ಷಣಾ ಕಾರ್ಯ ನಿರ್ವಹಿಸಲು 90 ಮೀಟರ್ ಎತ್ತರ ತಲುಪಬಲ್ಲ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ ಖರೀದಿಸಲಾಗಿರುತ್ತದೆ.
ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ, ಉಚಿತ ಬಸ್ ಪಾಸ್
ಇವೆಲ್ಲ ಕ್ರಮಗಳಗಳಿಂದ ಪ್ರಸ್ತುತ ಸಾಲಿನಲ್ಲಿ ಅಗ್ನಿಶಾಮಕ ಇಲಾಖೆಯಿಂದ 3,521 ಮಾನವ ಜೀವ ಹಾಗೂ 794.6 ಕೋಟಿ ರೂ. ಮೊತ್ತದ ಆಸ್ತಿ ಪಾಸ್ತಿ ರಕ್ಷಣೆ ಮಾಡಲು ಸಾಧ್ಯವಾಗಿರುತ್ತದೆ. ಈ ಯೋಜನೆಗೆ ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಕಾಯ್ದಿರಿಸಲಾಗಿದೆ ಎಂದು ಅವರು ಹೇಳಿದರು.
ಗೃಹ ರಕ್ಷಕರ ಕರ್ತವ್ಯ ಭತ್ಯೆ ಹೆಚ್ಚಳ:
ರಾಜ್ಯದಲ್ಲಿ ಕಾನೂನು ಮತ್ತು ಶಿಸ್ತು ಪಾಲನೆಯಲ್ಲಿ ಸಹಾಯ ಪಡೆಯಾಗಿ ಕಾರ್ಯ ನಿರ್ವಹಿಸುತ್ತಿರುವ 35 ಸಾವಿರ ನೊಂದಾಯಿತ ಗೃಹರಕ್ಷಕರಿಗೆ ಪ್ರಸ್ತುತ ಪ್ರತಿ ದಿನಕ್ಕೆ ನೀಡುತ್ತಿರುವ ಕರ್ತವ್ಯ ಭತ್ಯೆ 100 ರೂ. ನಷ್ಟು ಹೆಚ್ಚಿಸಲಾಗುವುದು.
30 ಕೋಟಿ ವೆಚ್ಚದಲ್ಲಿ ರಕ್ಷಣಾ ಉಪಕರಣ:
ದಾವಣಗೆರೆ ನಗರದಲ್ಲಿ ಹೊಸ ಎಸ್‍ಡಿಆರ್‍ಎಫ್ ಕಂಪೆನಿ ಮಂಜೂರು ಮಾಡಲಾಗಿದ್ದು, ರಾಜ್ಯದಲ್ಲಿನ ಎಸ್‍ಡಿಆರ್‍ಎಫ್ ಪಡೆಗಳಿಗೆ 30 ಕೋಟಿ ರೂ. ಮೊತ್ತದ ಶೋಧನಾ ಮತ್ತು ರಕ್ಷಣಾ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.
Cyber Security Center,#BasavarajBommai, #Budget2023, #StateBudget2023, #BommaiBudget, #ಬಜೆಟ್, #ಬಜೆಟ್2023,