ಬೆಂಗಳೂರು,ಡಿ.12- ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಜಿಟಿಜಿಟಿ ಮಳೆ ಇಂದು ಕೂಡ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಆಗಾಗ್ಗೆ ತುಂತುರು ಇಲ್ಲವೆ ಹಗುರ ಮಳೆಯಾಗುತ್ತಿದೆ.
ಅಲ್ಲದೆ, ತಂಪಾದ ಮೇಲ್ಮೈ ಗಾಳಿ ಬೀಸುವುದರಿಂದ ಉಂಟಾಗುವ ಮೈಕೊರೆಯುವ ಚಳಿಗೆ ಜನರು ತತ್ತರಿಸುತ್ತಿದ್ದಾರೆ.
ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರು, ರೈನ್ಕೋಟ್, ಜರ್ಕಿನ್, ಕೊಡೆಗಳನ್ನು ಆಶ್ರಯಿಸಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿತ್ತು. ಮಳೆ ನಿಂತು ಬಿಸಿಲು ಬಂದರೆ ಸಾಕು ಎಂಬ ಮನಸ್ಥಿತಿಗೆ ಬಹುತೇಕ ಜನರು ಬಂದಿದ್ದಾರೆ.
ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ರಾಗಿ, ಭತ್ತ, ಮೆಕ್ಕೆಜೋಳ, ತೊಗರಿ, ಆಲೂಗಡ್ಡೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗುತ್ತಿವೆ. ಇದರಿಂದ ರೈತ ಸಮುದಾಯ ತೀವ್ರ ಸಂಕಷ್ಟ ಎದುರಿಸುವಂತಾಗಿದೆ.
ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಜಾಮೀನು ಮಂಜೂರು
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ಮ್ಯಾಂಡೋಸ್ ಚಂಡಮಾರುತ ಪ್ರಭಾವ ತಗ್ಗಿದ್ದರೂ ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಮುಂದುವರೆದಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎರಡೂ ಜಿಲ್ಲೆಗಳಲ್ಲಿ 80 ಮಿ.ಮೀ.ವರೆಗೂ ಮಳೆಯಾದ ವರದಿಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ಬೆಂಗಳೂರಿನ ಕೊಟ್ಟಿಗೆ ಪಾಳ್ಯದಲ್ಲಿ 75.5ಮಿ.ಮೀ.ನಷ್ಟು ಮಳೆಯಾಗಿದೆ.
ರಾಜ್ಯದ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಉತ್ತರ ಒಳನಾಡಿನ ಹಲವು ಕಡೆ ಚದುರಿದಂತೆ ಮಳೆಯಾಗಿದೆ. ದಕ್ಷಿಣ ಒಳನಾಡಿ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ. ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ನಿರಂತರ ಮಳೆಯಾಗುತ್ತಿದೆ. ಹಮಾಮಾನ ಮುನ್ಸೂಚನೆ ಪ್ರಕಾರ ಇನ್ನೆರಡು ದಿನಗಳ ಕಾಲ ಮುಂದುವರೆಯಲಿದೆ.
ರಾಹುಲ್ ಗಾಂಧಿಗೆ ನಾರಿ ಶಕ್ತಿ ಬೆಂಬಲ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ಅವರ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತವು ದುರ್ಬಲಗೊಂಡು ಪ್ರಭಾವವು ಇಳಿಮುಖವಾಗಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ನಾಳೆಯವರೆಗೆ ಮಳೆ ಮುಂದುವರೆಯಲಿದೆ. ಬುಧವಾರದಿಂದ ಮಳೆ ಬಿಡುವುಕೊಡಲಿದೆ. ಗುರುವಾರದಿಂದ ವಾತಾವರಣ ಸಹಜ ಸ್ಥಿತಿಗೆ ಮರಳಲಿದ್ದು, ಬಿಸಿಲು ಕಾಣಬಹುದಾಗುದೆ ಎಂದು ಹೇಳಿದರು.
ಮತ್ತೆ ಮುಷ್ಕರಕ್ಕಿಳಿಯಲು ಸಾರಿಗೆ ನೌಕರರ ತೀರ್ಮಾನ
ಆದರೆ, ಮತ್ತೆ ವಾರಾಂತ್ಯಕ್ಕೆ ಮತ್ತೊಂದು ಸುತ್ತಿನ ಮಳೆಯಾಗಲಿದೆ. ಶನಿವಾರ ಮತ್ತು ಭಾನುವಾರ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಕೊಯ್ಲಿನ ಸಮಯವಾಗಿರುವುದರಿಂದ ಮಳೆ ಬಿಡುವು ಕೊಡಬೇಕು ಎಂಬ ನಿರೀಕ್ಷೆ ರೈತ ಸಮುದಾಯದಲ್ಲಿದೆ ಎಂದರು.
Cyclone, Mandous, effect, Bangalore,