ಚೆನ್ನೈ, ಡಿ. 9 – ಮಾಂಡೌಸ್ ಚಂಡಮಾರುತ ತಮಿಳುನಾಡು ಕರಾವಳಿ ಸಮೀಪಿಸುತ್ತಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿ ತಿಳಿಸಿದೆ. ಇದರಿಂದ ತಮಿಳುನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಪೂರ್ವ ಆಗ್ನೇಯಕ್ಕೆ 270 ಕಿಮೀ ದೂರದಲ್ಲಿ ಮಂಡೌಸ್ ಚಂಡಮಾರುತ ಇದೆ ಎಂದು ಹೇಳಿದೆ.
ಇಂದು ಮಾಮಲ್ಲಪುರಂ ಬಳಿ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ ಮುಂದಿನ ಕೆಲವು ಗಂಟೆಗಳಲ್ಲಿ ಇದು ಚಂಡಮಾರುತವಾಗಿ ದುರ್ಬಲಗೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರೀ ಮಳೆ ಮತ್ತು ಗಾಳಿಯ ಎಚ್ಚರಿಕೆಯ ದೃಷ್ಟಿಯಿಂದ ತಮಿಳುನಾಡಿನ ಹಲವಾರು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.
ಕಳವು ಮಾಡಿದ್ದ ಬೈಕ್‍ನಲ್ಲಿ ನೈಟ್ ರೌಂಡ್ಸ್ : ಮೊಬೈಲ್ ದೋಚುತ್ತಿದ್ದ ಮೂವರ ಬಂಧನ
ಏತನ್ಮಧ್ಯೆ, ನೆರೆಯ ಪುದುಚೇರಿಯಲ್ಲಿ, 2ದಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಿಗೆ ಪ್ರಬಲ ಅಲೆಗಲು ಅಪ್ಪಳಿಸಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.
ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಪರಿಹಾರ ಕಾರ್ಯಗಳಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳನ್ನು ಸಜ್ಜುಗೊಳಿಸಿದೆ ಮತ್ತು ಯಾವುದೇ ತುರ್ತು ಪರಿಸ್ಥಿತಿಗೆ ಸ್ಪಂದಿಸಲು ರಕ್ಷಣಾ ತಂಡಗಳನ್ನು ನಿಯೋಜಿಸಿದೆ.
ವಿದೇಶಿ ಪ್ರಜೆ ಸೇರಿ ನಾಲ್ವರು ಡ್ರಗ್ ಪೆಡ್ಲರ್‌ಗಳ ಬಂಧನ
ಪುದುಚೇರಿ ಬಂದರಿನಲ್ಲಿ ಚಂಡಮಾರುತದ ಎಚ್ಚರಿಕೆ ಸಂಕೇತ ಧ್ವಜವನ್ನು ಹಾರಿಸಲಾಗಿದೆ ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕೇಳಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಎನ್.ರಂಗಸಾಮಿ ಅವರು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ,ತುರ್ತು ಕ್ರಮಕ್ಕೆ ಸೂಚಿಸಿದ್ದಾರೆ.
ಮುಂದಿನ 5 ವರ್ಷದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ : ಆರ್.ಅಶೋಕ್
Cyclone, Mandous, IMD, heavy rain, Tamil Nadu, Puducherry,