ಚೆನ್ನೈ, ಡಿ.10- ಮಾಂಡೌಸ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಂಗಲುಪಟ್ಟು, ಕಾಂಚೀಪುರಂ, ತಿರುವಲ್ಲೂರು, ವಿಲ್ಲುಪುರಂ, ಕಡಲೂರು ಸೇರಿದಂತೆ 15 ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿನ್ನೆ ಸಂಜೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಚೆನ್ನೈನಿಂದ ಹೊರಡುವ ಹಲವಾರು ವಿಮಾನಗಳ ಸಂಚಾರ ಕೂಡ ರದ್ದುಪಡಿಸಲಾಗಿದೆ. ಮಹಾಬಲಿಪುರಂನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ವಿದ್ಯುತ್ ಕಂಬಗಳು, ಭಾರೀ ಗಾತ್ರದ ಮರಗಳು ಧರೆಗುರುಳಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಮಹಾಬಲಿಪುರಂನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಹಲವಾರು ಜನರನ್ನು ಸ್ಥಳಾಂತರ ಮಾಡಲಾಗಿದೆ. ಪುದುಚೇರಿಯಲ್ಲಿ ಚಂಡಮಾರುತದ ಪರಿಣಾಮವಾಗಿ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿರುವುದರಿಂದ ತೀರ ಪ್ರದೇಶದಲ್ಲಿ ಕಡಲ್ಕೊರೆತ ಉಂಟಾಗಿ 15ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ.
ಸಿನಿಮೀಯ ರೀತಿಯಲ್ಲಿ ಯುವತಿ ಅಪಹರಿಸಿದ ನೂರಕ್ಕೂ ಹೆಚ್ಚು ಯುವಕರು
ತಿರುಮಲದಲ್ಲೂ ಕೂಡ ಮಾಂಡೌಸ್ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಭಕ್ತರು ಪರದಾಡುವಂತಾಗಿದೆ. ಕರಾವಳಿ ಮತ್ತು ರಾಯಲುಸೀಮೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ನೆಲ್ಲೂರು ಜಿಲ್ಲೆಯ ಮುತ್ತುಕೂರ್‍ಮಂಡಲ್‍ನ ಬ್ರಹ್ಮನೇವಮ್‍ನಲ್ಲಿ 125.75ಮಿಮೀ ದಾಖಲೆ ಮಳೆಯಾಗಿದೆ. ಕರಾವಳಿ ಪ್ರದೇಶ ಪ್ರಕ್ಷುಬ್ಧವಾಗಿದ್ದು, ಮೈಪಾಡು ಕಡಲ ತೀರದಲ್ಲಿ ಭಾರೀ ಅಲೆಗಳ ಅಬ್ಬರಕ್ಕೆ ಸಮೀಪದ ಅಂಗಡಿಗಳು ಧರೆಗುರುಳಿವೆ.
ಸಂಚಾರಿ ನಿಯಮ ಉಲ್ಲಂಘನೆ ಸೆರೆ ಹಿಡಿಯಲು ಬಂದಿವೆ ಐಟಿಎಂ ಕ್ಯಾಮರಾಗಳು
ಅನಂತಸಾಗರಂ, ಚೆಸೆರ್ಲಾ, ಆತ್ಮಕುರು ಮತ್ತು ಸಂಗಮ್‍ನಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ತೀರದ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ನಿರ್ಮಾಣ ಮಾಡಲಾಗಿದೆ. ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ತಂಡ ಸ್ಥಳದಲ್ಲಿ ಬೀಡುಬಿಟ್ಟಿವೆ. ಕಡಪದಲ್ಲೂ ಕೂಡ ಭಾರೀ ಮಳೆಯಾಗುತ್ತಿದ್ದು, ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಕಾರಿಗಳು ಸೂಚನೆ ನೀಡಿದ್ದಾರೆ.
ಈಗಷ್ಟೇ ಭತ್ತದ ಕೊಯ್ಲು ಮಾಡಿದ್ದ ರೈತರಿಗೆ ಮಳೆ ಸಂಕಷ್ಟ ತಂದಿಟ್ಟಿದೆ. ಒಣಗಿದ ಧಾನ್ಯಗಳ ರಕ್ಷಣೆಗಾಗಿ ರೈತರು ಹರಸಾಹಸ ಪಡುತ್ತಿದ್ದಾರೆ.
Cyclone, Mandous, landfall, Tamil Nadu, coast,