ಬೆಂಗಳೂರು,ಡಿ.9- ಬಂಗಾಳಕೊಲ್ಲಿ ಯಲ್ಲಿ ಉಂಟಾಗಿರುವ ಮಾನ್‍ಡೋಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಆಗಾಗ್ಗೆ ಹಗುರ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಯಂತೆ ಮಂಗಳವಾರದವರೆಗೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಕೆಲವೆಡೆ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.
ಮಾನ್‍ಡೋಸ್ ಚಂಡಮಾರುತವು ತಮಿಳುನಾಡು ತಲುಪಿದ್ದು, ಉತ್ತರಾಭಿಮುಖವಾಗಿ ಆಂಧ್ರಪದ್ರೇಶದ ಕಡೆಗೆ ಚಲಿಸುತ್ತಿದೆ. ಇದರಿಂದ ತಮಿಳುನಾಡಿನ ಉತ್ತರ ಭಾಗ ಹಾಗೂ ಆಂಧ್ರಪ್ರದೇಶದ ದಕ್ಷಿಣ ಭಾಗದಲ್ಲಿ ಮಳೆಯಾಗಲಿದೆ.
ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ನ್ಯಾಯಾಲಯದ ಮುಂದೆ ಹಾಜರ್
ಚಂಡಮಾರುತದ ಪ್ರಭಾವದಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು, ಚಾಮರಾಜನಗರ, ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
ಇಂದು ಕೆಲವೆಡೆ ಹಗುರ ಇಲ್ಲವೆ ತುಂತುರು ಮಳೆಯಾಗಬಹುದು. ನಾಳೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು. 20-50 ಮಿ.ಮೀ.ವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಉತ್ತರ ಹಾಗೂ ಪೂರ್ವಭಾಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹೇಳಿದರು.
ವೆಬ್ ಸೀರಿಸ್ ಒಪ್ಪಂದಕ್ಕೆ ಸಹಿ : ಐಪಿಎಸ್ ಅಧಿಕಾರಿ ಅಮಾನತು
ಶನಿವಾರ ಮತ್ತು ಭಾನುವಾರ ಮಳೆಯ ಪ್ರಮಾಣ ಹೆಚ್ಚಿದ್ದು, ಸೋಮವಾರದಿಂದ ಇಳಿಮುಖವಾಗಲಿದೆ. ಮುಂದಿನ ಬುಧವಾರದ ವೇಳೆಗೆ ಸಹಜ ಸ್ಥಿತಿಗೆ ತಲುಪಿದರು. ಡಿ.16,17ರಂದು ಮತ್ತೊಂದು ಸುತ್ತಿನ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.
ಭಾರೀ ಮಳೆಯಾಗುವ ಮುನ್ಸೂಚನೆಗಳು ಸಧ್ಯಕ್ಕಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಚಂಡಮಾರುತದ ಪ್ರಭಾವ ಅಷ್ಟಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Cyclone Mandous, Rain, karnataka, December 13,