ರೀಮಲ್‌ ಚಂಡಮಾರುತ ಎಫೆಕ್ಟ್ : ಕರಾವಳಿ-ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಸಾಧ್ಯತೆ

ಬೆಂಗಳೂರು, ಮೇ 24- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ರೀಮಲ್‌ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಅಷ್ಟಾಗಿ ಆಗುವುದಿಲ್ಲ, ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇದರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಪಶ್ಚಿಮಬಂಗಾಳ ಹಾಗೂ ಬಾಂಗ್ಲಾ ದೇಶದ ಕಡೆಗೆ ಚಂಡಮಾರುತ ಸಾಗುತ್ತಿರುವುದರಿಂದ ಕರ್ನಾಟಕದ ಮೇಲೆ ಅದರ ನೇರ ಪರಿಣಾಮ ಉಂಟಾಗುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಇನ್ನೆರೆಡು ದಿನ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಇಳಿಮುಖವಾಗಲಿದೆ. ಆದರೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆದಿದೆ. ಜನವರಿಯಿಂದ … Continue reading ರೀಮಲ್‌ ಚಂಡಮಾರುತ ಎಫೆಕ್ಟ್ : ಕರಾವಳಿ-ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಸಾಧ್ಯತೆ