Home ಇದೀಗ ಬಂದ ಸುದ್ದಿ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಬೇಕು : ಕೆಂಚಪ್ಪಗೌಡ

ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಬೇಕು : ಕೆಂಚಪ್ಪಗೌಡ

0
ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗಬೇಕು : ಕೆಂಚಪ್ಪಗೌಡ

ಬೆಂಗಳೂರು,ಜ.12– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಯಾಗುವ ಎಲ್ಲಾ ಅರ್ಹತೆ ಇದ್ದು, ಕಾಂಗ್ರೆಸ್ ಹೈಕಮಾಂಡ್ ಯಾರ ಪರ ವಹಿಸಲಿದೆ ಎಂಬುದನ್ನು ಕಾದುನೋಡುವುದಾಗಿ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಿವಕುಮಾರ್ ಅವರು ಕಾರಣ. ಹೀಗಾಗಿ ಅವರೇ ಮುಖ್ಯಮಂತ್ರಿಯಾಗ ಬೇಕು ಎಂಬುದು ನಮ ಒತ್ತಾಯ ಎಂದರು.ಶಿವಕುಮಾರ್ ಮುಖ್ಯಮಂತ್ರಿ ಯಾಗಬೇಕು. ಅದಕ್ಕಾಗಿ ನಮ ಹೋರಾಟ ಇದ್ದೇ ಇರುತ್ತದೆ ಎಂದು ಹೇಳಿದರು.

ಸಚಿವ ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು. ಜಾತಿಗಣತಿ ವಿಚಾರವನ್ನು ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಹೊಸದಾಗಿ ಜಾತಿಗಣತಿ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಉರುಳಿಸುವ ತಾಕತ್ತು ಹೊಂದಿರುವ ಜನಾಂಗ ನಮದು. ಅದಕ್ಕೆ ಈ ಹಿಂದೆ ಅನೇಕ ಉದಾಹರಣೆಗಳಿವೆ ಎಂದು ಹೇಳಿದರು.