Saturday, May 4, 2024
Homeರಾಜ್ಯನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್-ಡಾ.ಸಿ.ಎನ್.ಮಂಜುನಾಥ್ ಮುಖಾಮುಖಿ

ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್-ಡಾ.ಸಿ.ಎನ್.ಮಂಜುನಾಥ್ ಮುಖಾಮುಖಿ

ರಾಮನಗರ,ಏ.4- ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್‍ನ ಅಭ್ಯರ್ಥಿ ಡಿ.ಕೆ.ಸುರೇಶ್ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಡಿ.ಕೆ.ಸುರೇಶ್ ಅವರು ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರೊಂದಿಗೆ ತೆರಳಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ್ದರು. ಇಂದು ಮತ್ತೊಮ್ಮೆ 2 ಪ್ರತಿಗಳ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ರಾಮನಗರದ ಶಾಸಕ ಇಕ್ಬಾಲ್ ಹುಸೇನ್, ವಿಧಾನಸಭಾ ಸದಸ್ಯ ರವಿ ಈ ಸಂದರ್ಭದಲ್ಲಿ ಡಿ.ಕೆ.ಸುರೇಶ್‍ರವರ ಜೊತೆಯಲ್ಲಿದ್ದರು. ಡಾ.ಸಿ.ಎನ್.ಮಂಜುನಾಥ್‍ರವರು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಶಾಸಕ ಮುನಿರತ್ನ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಹೊರಬರುವಾಗ ಎರಡೂ ಪಕ್ಷಗಳ ನಾಯಕರು ಮುಖಾಮುಖಿಯಾದರು. ಡಿ.ಕೆ.ಸುರೇಶ್ ಮತ್ತು ಮುನಿರತ್ನ ಪರಸ್ಪರ ಹಸ್ತಲಾಘವ ಮಾಡಿದ್ದು ಗಮನ ಸೆಳೆಯಿತು.

RELATED ARTICLES

Latest News