ಬೆಂಗಳೂರು,ನ.27- ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್‍ನಿಂದ ವಿದೇಶಕ್ಕೆ ಕರೆ ಹೋಗುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ. ವಿಶೇಷವಾಗಿ ಮಲೆನಾಡು, ಕರಾವಳಿ ತೀರಾಪ್ರದೇಶ,
ಕಿತ್ತೂರು ಕರ್ನಾಟಕ, ಮಧ್ಯಕರ್ನಾಟಕ ಸೇರಿದಂತೆ ದಟ್ಟ ಅರಣ್ಯ ಪ್ರದೇಶಗಳಲ್ಲಿ ಅನಾಮಧೇಯ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಹೇಳಿ ಕೇಳಿ ಕರ್ನಾಟಕದ ವಿವಿಧ ಪ್ರದೇಶಗಳು ಅಂತಾರಾಷ್ಟ್ರೀಯ ಭಯೋತ್ಪಾದಕರ ಹಿಟ್‍ಲಿಸ್ಟ್‍ನಲ್ಲಿದೆ. ಇಂತಹ ಸಂದರ್ಭದಲ್ಲೇ ಸ್ಯಾಟಲೈಟ್ ಫೋನ್‍ಗಳು ರಿಂಗಣಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಎನ್‍ಐಎ ತನಿಖಾ ತಂಡದ ಮೂಲಗಳ ಪ್ರಕಾರ ಚಿಕ್ಕಮಗಳೂರಿನ ಅರಣ್ಯಗಳಲ್ಲಿ ಹಾಗೂ ಕರಾವಳಿ ಭಾಗದಲ್ಲಿ ಸ್ಯಾಟ್‍ಲೈಟ್ ಫೋನ್‍ಗಳ ಸಿಗ್ನಲ್ ಪತ್ತೆಯಾಗಿದೆ. ಮಂಗಳೂರಿನ ಎರಡು ಕಡೆಗಳಲ್ಲಿ ಹಾಗೂ ಉತ್ತರಕನ್ನಡ ಮತ್ತು ಚಿಕ್ಕಮಗಳೂರಿನ ಅರಣ್ಯ ಭಾಗಗಳಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್‍ಗಳು ಅಕ್ರಮವಾಗಿ ಕಾರ್ಯಾಚರಣೆ ನಡೆದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಎನ್‍ಐಎ ಅಕಾರಿಗಳು ತನಿಖೆ ಕೈಗೊಂಡಿದ್ದಾರೆ. ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ಕೇಂದ್ರದ ಐಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇಂಧೋರ್ ತಲುಪಿದ ಕಾಂಗ್ರೆಸ್ ‘ಐಕ್ಯತಾ ಯಾತ್ರೆ’
ಚಿಕ್ಕಮಗಳೂರು ಜಿಲ್ಲೆಯ ಕಡೂರು ಬೀರೂರು ನಡುವಿನ ದಟ್ಟ ಅರಣ್ಯ ಭಾಗಗಳಲ್ಲಿ ಸ್ಯಾಟಲೈಟ್ ಫೋನ್‍ಗಳು ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.
ಮಂಗಳೂರು ನಗರ ಹೊರಭಾಗದ ನಾಟೆಕಲ್, ಕುಳಾಯಿ, ಚಿಕ್ಕಮಗಳೂರು ಜಿಲ್ಲೆಯ ದಟ್ಟ ಅರಣ್ಯ ಪ್ರದೇಶ, ಉತ್ತರಕನ್ನಡದ ಯಲ್ಲಾಪುರ, ಸಿರಸಿ ಭಾಗಗಳಲ್ಲಿ ಸ್ಯಾಟಲೈಟ್ ಫೋನ್ ರಿಂಗಣಿಸಿದೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ- ಶಿರಸಿ ಮಧ್ಯೆ ಇರುವ ದಟ್ಟಾರಣ್ಯ ಪ್ರದೇಶ, ಮಂಗಳೂರು ನಗರ ಹೊರಭಾಗದ ನಾಟೇಕಲ್ ಮತ್ತು ಕುಳಾಯಿ ಪ್ರದೇಶಗಳಲ್ಲೂ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿರುವುದನ್ನು ಬಗ್ಗೆ ಗುಪ್ತಚರ ಇಲಾಖೆ ಪತ್ತೆ ಮಾಡಿದೆ.
ಸ್ಯಾಟಲೈಟ್ ಫೋನ್‍ಗಳು ದೂರಸಂಪರ್ಕ ಸೇವೆ ಒದಗಿಸುವ ಕಂಪನಿಗಳ ಸಂಪರ್ಕದ ಅಗತ್ಯವಿಲ್ಲದೆ ನೇರವಾಗಿ ಉಪಗ್ರಹದ ಸಹಾಯದಿಂದ ಕರೆ ಮಾಡಬಹುದಾದ ಸಾಧನವಾಗಿದೆ.
ಲಾಕ್‍ಡೌನ್ ಖಂಡಿಸಿ ಪಂಜು ಹಿಡಿದು ಬೀದಿಗಿಳಿದ ಚೀನಾ ಜನ
ಇದನ್ನು ಸಾಮಾನ್ಯ ಜನರು ಬಳಸುವುದಿಲ್ಲ. ಬದಲಾಗಿ ನಕ್ಸಲರು, ಉಗ್ರಗಾಮಿಗಳು, ಭೂಗತ ಪಾತಕಿಗಳು ಸ್ಥಳೀಯ ಭದ್ರತಾ ವ್ಯವಸ್ಥೆಯ ಕಣ್ತಪ್ಪಿಸಲು ಇಂತಹ ಸಾಧನಗಳನ್ನು ಬಳಸುತ್ತಾರೆ.
ಈ ಹಿಂದೆ ಸ್ಯಾಟಲೈಟ್ ಫೋನ್ ಗಳ ಬಳಕೆ ದೇಶದಲ್ಲಿತ್ತು. ಆದರೆ 2008ರ ಮುಂಬೈ ಭಯೋತ್ಪಾದಕ ದಾಳಿಯ ಬಳಿಕ ಸ್ಯಾಟಲೈಟ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ. ಆದ್ದರಿಂದ ಇಂತಹ ಕರೆ ದೇಶದ ಯಾವ ಭಾಗದಿಂದ ಹೊರಟರೂ ಭದ್ರತಾ ಪಡೆಗಳು ವಿಶೇಷ ಗಮನಹರಿಸುತ್ತವೆ.
ಪ್ಲಾಸ್ಟಿಕ್ ಮುಕ್ತವಾಗಿರಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಕೆಲ ದಿನಗಳಿಂದ ನಕ್ಸಲ್ ನಿಗ್ರಹ ಕ್ಯಾಂಪ್ ಗಳಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಪೊಲೀಸ್ ಅಧಿಕಾರಿಗಳು ತಮ್ಮ ಮೂಲ ಇಲಾಖೆಗೆ ವಾಪಸ್ಸಾಗಿದ್ದರು.ಆದರೆ ಈ ನಡುವೆ ಮತ್ತೆ ಮಲೆನಾಡು ದಟ್ಟಾರಣ್ಯ ಭಾಗದಲ್ಲಿ ಸ್ಯಾಟಲೈಟ್ ಫೋನುಗಳು ಪುನಃ ಸಕ್ರಿಯವಾಗಿರುವುದು ಮತ್ತೆ ಆತಂಕ ಸೃಷ್ಟಿಸಿದೆ.
dakshinakannada, satellite, phone, call, police, forestarea,