ಬೆಂಗಳೂರು,ಡಿ.16- ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೆಗ್ಯುಲರ್ ಬೇಲ್ ಜಾರಿಯಾದ ಹಿನ್ನೆಲೆಯಲ್ಲಿ ಸೆಷನ್ ಕೋರ್ಟ್ ಗೆ ಹಾಜರಾಗಿ ನಂತರ ಕತ್ರಿಗುಪ್ಪೆಯಲ್ಲಿರುವ ವಿಜಯಲಕ್ಷ್ಮಿ ಅವರ ಅಪಾರ್ಟ್ ಮೆಂಟ್ ಗೆ ತೆರಳಿದ್ದಾರೆ.
ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ , ನಟ ಧನ್ವೀರ್, ನಿರ್ದೇಶಕ ತರುಣ್ ಸುಧೀರ್ ಅವರು ಇಂದು ಬಿಜಿಎಸ್ ಆಸ್ಪತ್ರೆಗೆ ತೆರಳಿ ಅಲ್ಲಿಂದ ದರ್ಶನ್ ಅವರನ್ನು ಸೆಷನ್ ಕೋರ್ಟ್ ಗೆ ಕರೆದುಕೊಂಡರು ಹೋದರು.
ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆಯಾದ ದರ್ಶನ್ ಅವರು ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಶ್ಯೂರಿಟಿ ಬಾಂಡ್ ಗೆ ಸಹಿ ಹಾಕಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಕತ್ರಿಗುಪ್ಪೆಯಲ್ಲಿರುವ ತಮ ಪತ್ನಿ ವಿಜಯಲಕ್ಷ್ಮಿ ಅವರ ಅಪಾರ್ಟ್ ಮೆಂಟ್ ಗೆ ದರ್ಶನ್ ತೆರಳಿದರು.
ಚಿತ್ರದುರ್ಗದ ತಮ ಅಭಿಮಾನಿ ರೇಣುಕಾಸ್ವಾಮಿ ಅವರ ಕೊಲೆ ಆರೋಪದಡಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದ ದರ್ಶನ್ ರಾಜ್ಯಾತಿಥ್ಯಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ನಂತರ ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ಆದರೆ ಬೆನ್ನು ನೋವಿನ ಸಲುವಾಗಿ ಅಕ್ಟೋಬರ್ 30 ರಂದು ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ವಿಜಯಲಕ್ಷ್ಮಿಯ ಮನೆ ಸೇರಿದ್ದ ದರ್ಶನ್, ಮೂರು ದಿನಗಳ ನಂತರ ಬಿಜಿಎಸ್ ಆಸ್ಪತ್ರೆಗೆ ದಾಖಲಾದರು. ಆದರೆ ಇದು ಜಾಮೀನು ಪಡೆದ ದರ್ಶನ್ ಮನೆಗೆ ತೆರಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ಪವಿತ್ರಾಗೌಡ ಸೇರಿದಂತೆ ಇತರ ಆರೋಪಿಗಳಿಗೂ ಜಾಮೀನು ಸಿಕ್ಕಿದೆ.