No menu items!
Monday, September 16, 2024
No menu items!
Homeರಾಜ್ಯಕೆಸೆಟ್‌-2024ಗೆ ಅರ್ಜಿ ಸಲ್ಲಿಸುವ ದಿನಾಂಕ ಆ.28ರವರೆಗೆ ವಿಸ್ತರಣೆ

ಕೆಸೆಟ್‌-2024ಗೆ ಅರ್ಜಿ ಸಲ್ಲಿಸುವ ದಿನಾಂಕ ಆ.28ರವರೆಗೆ ವಿಸ್ತರಣೆ

Date of application for Kset-2024 extended till August 28

ಬೆಂಗಳೂರು, ಆ.22-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್‌-2024)ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ.28ರವರೆಗೆ ವಿಸ್ತರಿಸಿದೆ.

ರಾಜ್ಯ ಸರ್ಕಾರದ ನಿರ್ದೇಶನದಂತೆ ಕೆಸೆಟ್‌ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಆ. 30 ಕಡೆಯ ದಿನವಾಗಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ.

ಜುಲೈ 7ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೆಸೆಟ್‌ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ.22ಕ್ಕೆ ನಿಗದಿಗೊಳಿಸಲಾಗಿತ್ತು. ಕೊನೆಯ ದಿನಾಂಕ ವಿಸ್ತರಿಸಲು ಸರ್ಕಾರ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕೆಇಎಯು ಆನ್‌ಲೈನ್‌ ಮೂಲಕ ಕೆಸೆಟ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಿದೆ.

ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳು ಅಧಿಸೂಚನೆಯಲ್ಲಿರುವಂತೆ ಅನ್ವಯವಾಗಲಿವೆ ಎಂದು ತಿಳಿಸಲಾಗಿದೆ.

RELATED ARTICLES

Latest News