ಚಿಕ್ಕಮಗಳೂರು, ಡಿ.3- ಇದೇ ತಿಂಗಳು 6 ರಿಂದ 8ರ ವರೆಗೆ ನಡೆಯುವ ದತ್ತ ಜಯಂತಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದತ್ತ ಜಯಂತಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡದಂತೆ ಬಂದೋಬಸ್ತ್ ಮಾಡಿದ್ದು, ಮೂವರು ಎಸ್‍ಪಿಗಳು, ಇಬ್ಬರು ಎಎಸ್‍ಪಿಗಳು, 15 ಡಿವೈಎಸ್‍ಪಿ, 35 ಸಿಪಿಐಗಳು, ಕೆಎಸ್‍ಆರ್‍ಪಿ ತುಕಡಿ, ಡಿಎಆರ್ ತುಕಡಿ ಸೇರಿದಂತೆ 3000 ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದರು.
ಗಡಿನಾಡು ಅಭಿವೃದ್ಧಿಗೆ ಅಧಿವೇಶನದಲ್ಲಿ ಮಹತ್ವದ ಘೋಷಣೆ ಸಾಧ್ಯತೆ
ದತ್ತ ಪೀಠಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಜಿಲ್ಲೆಗೆ ಆಗಮಿಸುವ ನಾಲ್ಕು ಕಡೆಗೂ ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗುವುದು. ದತ್ತಪೀಠ ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು.
ಶಾಂತಿ ಹಾಗೂ ಸುವ್ಯವಸ್ಥೆಯಿಂದ ದತ್ತ ಜಯಂತಿ ನಡೆಯಲು ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಪೊಲೀಸ್ ಇಲಾಖೆ ನಿಗಾ ಇಡಲಿದೆ ಎಂದರು.
ಚಿರತೆ ಸೆರೆಗೆ ವಿಶೇಷ ತಂಡ ರಚನೆ : ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಣೆ
ಪೊಲೀಸರಿಂದ ಮಾಬ್ ಡ್ರಿಲ್: ನಗರದ ರಾಮನಹಳ್ಳಿ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆ ಮಾಬ್ ಆಪರೇಷನ್‍ನಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸುವ ಹಾಗೂ ಗಾಯಗೊಂಡವರನ್ನು ಕರೆದು ಆಸ್ಪತ್ರೆಗೆ ಸೇರಿಸುವ ವಿವಿಧ ಅಣಕು ಪ್ರದರ್ಶನ ನಡೆಯಿತು.
ಏಕಾಏಕಿ ಗಲಾಟೆ ನಡೆದ ವೇಳೆ ಉದ್ರಿಕ್ತ ಗುಂಪನ್ನು ಚದುರಿಸುವ ಪೊಲೀಸರು ಹೇಗೆ ವರ್ತಿಸಬೇಕು ಎಂಬ ನಿಟ್ಟಿನಲ್ಲಿ ಅಣುಕ ಪ್ರದರ್ಶನ ನಡೆಸಲಾಯಿತು.
ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಪೋಟ, ಇಬ್ಬರ ಸಾವು, ಹಲವರಿಗೆ ಗಾಯ
ಪೊಲೀಸರು ಹೇಗೆಲ್ಲಾ ಕಾರ್ಯನಿರ್ವಹಿಸಬೇಕು ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವ ರೀತಿ ಪೊಲೀಸರು ಸಾರ್ವಜನಿಕರೊಂದಿಗೆ ನಡೆದುಕೊಳ್ಳುವ ರೀತಿ ಹಾಗೂ ತರಬೇತಿ ಈ ಸಂದರ್ಭದಲ್ಲಿ ನೀಡಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ಮಾರ್ಗದರ್ಶನ ನೀಡಿದರು.
Datta Jayanti, Chikmagalur, police, security,