Tuesday, March 25, 2025
Homeಕ್ರೀಡಾ ಸುದ್ದಿ | Sportsಏರ್‌ಇಂಡಿಯಾ ವಿಮಾನ ವಿಳಂಬ, ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ವಾರ್ನರ್ ತೀವ್ರ ಅಸಮಾಧಾನ

ಏರ್‌ಇಂಡಿಯಾ ವಿಮಾನ ವಿಳಂಬ, ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ವಾರ್ನರ್ ತೀವ್ರ ಅಸಮಾಧಾನ

David Warner slams Air India over flight delay; airline blames Bengaluru storm

ನವದೆಹಲಿ, ಮಾ.23- ದೇಶದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಯಾದ ಏರ್‌ಇಂಡಿಯಾ ವಿಮಾನ ವಿಳಂಬವಾಗಿದ್ದಕ್ಕೆ ಆಸ್ಟ್ರೇಲಿಯಾ ಮಾಜಿ ಸ್ಟಾರ್ ಕ್ರಿಕೆಟರ್ ಡೇವಿಡ್ ವಾರ್ನರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, ನಾವು ಪೈಲಟ್ ಗಳಿಲ್ಲದ ಏರ್ ಇಂಡಿಯಾ ವಿಮಾನ ಹತ್ತಿದ್ದೇವೆ. ಗಂಟೆಗಟ್ಟಲೆ ಅದರಲ್ಲೇ ಕಾಯುವಂತಾಗಿದೆ. ಪೈಲಟ್‌ಗಳಿಲ್ಲದ ವಿಮಾನಕ್ಕೆ ಪ್ರಯಾಣಿಕರನ್ನು ಏಕೆ ಹತ್ತಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ, ಬೆಂಗಳೂರು ವಿರೋರ್ಟ್‌ನಿಂದ ಹವಾಮಾನ ಸಂಬಂಧಿತ ಅಡಚಣೆಗಳಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ಮಾರ್ಗ ಬದಲಾವಣೆ ಮತ್ತು ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿದೆ. ಹೀಗಾಗಿ ನಿಮ್ಮ ವಿಮಾನ ನಿರ್ವಹಿಸುವ ಸಿಬ್ಬಂದಿಯನ್ನ ತಡೆಯಹಿಡಿಯಲಾಗಿದ್ದು, ವಿಳಂಬಕ್ಕೆ ಕಾರಣವಾಗಿದೆ. ನಿಮ್ಮ ತಾಳ್ಮೆಯನ್ನು ಪ್ರಸಂಶಿಸುತ್ತೇವೆ, ನಮ್ಮ ವಿಮಾನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ.

ಡೇವಿಡ್ ವಾರ್ನರ್ ಅವರು ಟ್ರಾವೆಲ್ ಏಜೆಂಟ್ ಮೂಲಕ ಟಿಕೆಟ್ ಬುಕ್ ಮಾಡಿದ್ದರು. ಮರುಪಾವತಿ ಲಭ್ಯವಿಲ್ಲದ ಟಿಕೆಟ್ ಬುಕ್ ಮಾಡಿದ ಕಾರಣ ಟ್ರಾವೆಲ್ ಏಜೆಂಟ್ ಟಿಕೆಟ್ ಹಣ ವಾಪಸ್ ನೀಡಲು ನಿರಾಕರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಳೆದ ಫೆಬ್ರವರಿಯಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮುರಿದ ಸೀಟನ್ನು ನೀಡಿದ್ದಕ್ಕೆ ಏರ್ ಇಂಡಿಯಾ ವಿರುದ್ಧ ಕಿಡಿಕಾರಿದ್ದರು. ಇತ್ತೀಚೆಗೆ ಭಾರತೀಯ-ಕೆನಡಾದ ನಟಿ ಲೀಸಾ ರೇ ಸಹ ತಮ್ಮ ಎಕ್ಸ್‌ನಲ್ಲಿ ಏರ್ ಇಂಡಿಯಾವನ್ನು ಟೀಕಿಸಿದ್ದರು.

ಪ್ರಯಾಣಿಕರಿಂದ ಪೂರ್ಣ ಟಿಕೆಟ್ ದರ ಪಡೆಯುವ ವಿಮಾನಯಾನ ಸಂಸ್ಥೆ ಕಳಪೆ ದರ್ಜೆಯ ಸೌಲಭ್ಯ ನೀಡಿದೆ. ಹಣಕ್ಕೆ ತಕ್ಕ ಸೌಲಭ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ಇದು ಪ್ರಯಾಣಿಕರಿಗೆ ಮಾಡುವ ಮೋಸ. ನನ್ನ ಪ್ರಯಾಣದ ವೇಳೆ ಸೀಟು ಮುರಿದಿತ್ತು ಎಂದು ತಮಗಾದ ಕಹಿ ಅನುಭವವನ್ನು ಎಹಂಚಿಕೊಂಡಿದ್ದರು.

ಎರಡು ದಿನಗಳ ಹಿಂದಷ್ಟೇ, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ವಿಮಾನ ತಡವಾದ ಹಾರಾಟಕ್ಕೆ ತೀವ್ರ ಬೇಸರಿಸಿದ್ದರು. ಸಂಸ್ಥೆ ಅಧಿಕ ಮೊತ್ತ ಪಾವತಿಸಿಕೊಂಡು, ಸರಿಯಾದ ಸಮಯಕ್ಕೆ ವಿಮಾನಗಳ ಹಾರಾಟ ನಡೆಸುತ್ತಿಲ್ಲ. ಇದರಿಂದ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯ ಈ ಬಗ್ಗೆ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದರು.

RELATED ARTICLES

Latest News