Sunday, September 8, 2024
Homeರಾಜ್ಯಸರ್ಕಾರದ 6ನೇ ಗ್ಯಾರಂಟಿ ಜಾರಿ : ಡಿಸಿಎಂ ಡಿಕೆಶಿ

ಸರ್ಕಾರದ 6ನೇ ಗ್ಯಾರಂಟಿ ಜಾರಿ : ಡಿಸಿಎಂ ಡಿಕೆಶಿ

ಬೆಂಗಳೂರು,ಜು.20- ನಮ್ಮ ಸರ್ಕಾರ ನುಡಿದಂತೆ ನೆಡೆದಿದ್ದು ನೌಕರರ 7ನೇ ವೇತನ ಆಯೋಗದ ವರದಿಯನ್ನು 6ನೇ ಗ್ಯಾರಂಟಿಯಾಗಿ ಜಾರಿಗೊಳಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಚನ್ನಪಟ್ಟಣ ತಾಲ್ಲೂಕು ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಸೇವಾರತ್ನ ಪ್ರಶಸ್ತಿ ಪ್ರಧಾನ ಹಾಗೂ 7ನೇ ವೇತನ ಆಯೋಗ ಜಾರಿ ಸಂಬಂಧ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ನೀಡಿದ್ದ ಭರವಸೆಯಂತೆ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಈಗಾಗಲೇ ಎನ್.ಪಿ.ಎಸ್ ರದ್ದುಗೊಳಿಸಿ ಓ.ಪಿ.ಎಸ್ ಜಾರಿಗೊಳಿಸಿರುವ ರಾಜ್ಯಗಳಿಗೆ ಮೂರು ರಾಜ್ಯಗಳಿಗೆ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳನ್ನು ನಿಯೋಜಿಸಿ ಅವರಿಂದ ವರದಿ ಪಡೆದು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ರವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯಯವರೊಂದಿಗೆ ಚರ್ಚಿಸಿದ್ದು ಕೆಲವೇ ದಿನಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.

ಸಾರಿಗೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿಯವರು ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಿ ವಿದ್ಯಾರ್ಥಿಗಳ ಬಗ್ಗೆ ಆಶಯ ನುಡಿಗಳನ್ನಾಡಿದರು ಹಾಗೂ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ರವರು ಸೇವಾರತ್ನ ಪ್ರಶಸ್ತಿ ಪ್ರಧಾನ ಮಾಡಿ ಪ್ರತಿಭಾನ್ವಿತ ಮಕ್ಕಳಿಗೆ ಶುಭಾಶಯ ಕೋರಿದರು.

ಜಿಲ್ಲಾಧ್ಯಕ್ಷ ಸತೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ರಾಜ್ಯ ಖಜಾಂಚಿ ಡಾ. ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಂ.ವಿ ರುದ್ರಪ್ಪ, ಬಸವರಾಜು, ಉಪಾಧ್ಯಕ್ಷ ಹರ್ಷ, ಸಿದ್ದೇಶ್, ಗಿರಿಗೌಡ, ಸೋಮಶೇಖರ್, ಪಾಂಡುರಂಗ, ಚೇತನ್, ನಾಗಭೂಷಣ್, ಶಂಕರಪ್ಪ ಮತ್ತು ರಾಮನಗರ ಜಿಲ್ಲಾ ಶಾಖೆಯ ಎಲ್ಲ ಪದಾ„ಕಾರಿಗಳು, ಜಿಲ್ಲಾಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಪದಾಧಿಕಾರಿಗಳು ಜಿಲ್ಲಾಯ ಸರ್ಕಾರಿ ನೌಕರರು, ಕುಟುಂಬ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES

Latest News