Thursday, December 12, 2024
Homeರಾಜಕೀಯ | Politicsಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ : ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ : ಡಿ.ಕೆ.ಶಿವಕುಮಾರ್

ಬೆಂಗಳೂರು,ಡಿ.10- ಕಾಂಗ್ರೆಸ್ ಎಂದೆಂದಿಗೂ ನುಡಿದಂತೆ ನಡೆಯುವ ಪಕ್ಷವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣಾ ಪೂರ್ವ ಕರ್ನಾಟಕದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಯನ್ನು ಅಕಾರಕ್ಕೆ ಬರುತ್ತಿದ್ದಂತೆ ನಾವು ಜಾರಿಗೆ ತಂದಿದ್ದೇವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದ್ದು,ಜೂ.11ರಿಂದ ಇಲ್ಲಿಯವರೆಗೆ ಡಿ.8ರವರೆಗೆ ಒಟ್ಟು 110.67 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರ ಮೌಲ್ಯ ರೂ.2642.20 ಕೋಟಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ಈಗ ತೆಲಂಗಾಣದಲ್ಲಿ ಸುಮಾರು ನಾಲ್ಕು ಕೋಟಿ ನಾಗರಿಕರಿದ್ದಾರೆ. ಅಲ್ಲಿಯ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಸೌಕರ್ಯವನ್ನು ಕಲ್ಪಿಸಲಾಗಿದೆ. ಇದರಿಂದ ನಮ್ಮದು ನುಡಿದಂತೆ ನಡೆಯುವ ಪಕ್ಷ ಎಂಬುದು ಸಾಬೀತಾಗಿದೆ ಎಂದು ಪುನರುಚ್ಚಿಸಿದ್ದಾರೆ.

ನಾಳೆಯಿಂದ ಮತ್ತಷ್ಟು ರಂಗೇರಲಿದೆ ಬೆಳಗಾವಿ ಅಧಿವೇಶನ

ಕರ್ನಾಟಕದಂತೆ ತೆಲಂಗಾಣದ ಚುನಾವಣಾ ಪ್ರಚಾರದ ವೇಳೆ ಕೆಲ ಗ್ಯಾರಂಟಿ ಯೋಜನೆಗಳ ಭರವಸೆ ನೀಡಲಾಗಿತ್ತು. ನಮ್ಮ ಮಾತಿನ ಮೇಲೆ ವಿಶ್ವಾಸವಿಟ್ಟು ಅಲ್ಲಿನ ಮಹಿಳೆಯರು ಬಹು ದೊಡ್ಡ ಬೆಂಬಲ ನೀಡಿ ಪಕ್ಷವನ್ನು ಗೆಲ್ಲಿಸಿದ್ದಾರೆ ಕೊಟ್ಟ ಮಾತಿನಂತೆ ತೆಲಂಗಾಣ ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ವನ್ನು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

RELATED ARTICLES

Latest News