Friday, May 3, 2024
Homeರಾಜ್ಯಸಚಿವರಿಗೆ ಡಿಸಿಎಂ ಡಿಕೆಶಿ ಭೋಜನಕೂಟ

ಸಚಿವರಿಗೆ ಡಿಸಿಎಂ ಡಿಕೆಶಿ ಭೋಜನಕೂಟ

ಬೆಂಗಳೂರು,ಫೆ.24- ಲೋಕಸಭೆ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲಾಬಲ ಕ್ರೋಡೀಕರಣಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಡರಾತ್ರಿ ಸದಾಶಿವನಗರದ ಮನೆಯಲ್ಲಿ ಸಂಪುಟದ ಸಚಿವರ ಜೊತೆ ಭೋಜನಕೂಟ ಏರ್ಪಡಿಸಿ ಚರ್ಚೆ ನಡೆಸಿದ್ದಾರೆ. 8 ಜನ ಸಚಿವರನ್ನುಹೊರತುಪಡಿಸಿದರೆ ಉಳಿದ ಎಲ್ಲರೂ ನಿನ್ನೆಯ ಭೋಜನಕೂಟದಲ್ಲಿ ಭಾಗವಹಿ ಸಿದ್ದರು. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಹತ್ವದ ಚರ್ಚೆಯಾಗಿದೆ.

ಕೆಲವು ಕ್ಷೇತ್ರಗಳಲ್ಲಿ 2-3 ಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಅವರ ನಡುವೆ ಚರ್ಚೆ ನಡೆಸಿ ಯಾವುದೇ ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಸೌಹಾರ್ದಯುತವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಪ್ರಮುಖ ವಿಚಾರವಾಗಿ ಚರ್ಚೆಯಾಗಿದೆ. ಜೊತೆಗೆ ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆಗಳಾಗಿವೆ.

ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ಹೊಣೆಗಾರಿಕೆ ಒಪ್ಪಿಕೊಳ್ಳಬೇಕು. ರಾಜ್ಯಮಟ್ಟದಲ್ಲಿ ಅಷ್ಟೇ ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ. ಹೀಗಾಗಿ ಹೈಕಮಾಂಡ್‍ನ ಸಂದೇಶದನುಸಾರ ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು. ಆಂತರಿಕವಾಗಿ ಸಣ್ಣಪುಟ್ಟ ಭಿನ್ನಮತಗಳಿದ್ದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳಬಾರದೆಂದು ಸಲಹೆ ನೀಡಲಾಗಿದೆ.

ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..!

ಜಿಲ್ಲಾ ನಾಯಕರುಗಳ ನಡುವೆ ಹೊಂದಾಣಿಕೆ ಮೂಡಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ. ಈಗಾಗಲೇ ನಿಗಮ ಮಂಡಳಿಗಳ ನೇಮಕಾತಿಯಿಂದಾಗಿ ಶಾಸಕರ ನಡುವಿನ ಅಸಮಾಧಾನವನ್ನು ಸರಿಪಡಿಸಲಾಗಿದೆ. ಕಾರ್ಯಕರ್ತರ ನಿಗಮ ಮಂಡಳಿ ನೇಮಕಾತಿಗೆ ಸಚಿವರು ಶೀಘ್ರವೇ ಪಟ್ಟಿಯನ್ನು ರವಾನಿಸಬೇಕು ಮತ್ತು ಕೆಳಹಂತದ ಸಮಿತಿಗಳ ನೇಮಕಾತಿಗೂ ಕಾರ್ಯಕರ್ತರ ಹೆಸರುಗಳನ್ನು ಸೂಚಿಸಬೇಕೆಂದು ನಿನ್ನೆಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಚಿವರಿಗೆ ಸೂಚನೆ ನೀಡಿದ್ದಾರೆ.

ಬಿಜೆಪಿ ಅನುಸರಿಸುತ್ತಿರುವ ರಾಜಕೀಯ ತಂತ್ರಗಾರಿಕೆಗೆ ಪ್ರತಿತಂತ್ರ ರೂಪಿಸುವುದು ಅತ್ಯಗತ್ಯ. ಸುಳ್ಳು ಮತ್ತು ಭಾವನಾತ್ಮಕ ರಾಜಕಾರಣಕ್ಕೆ ಎಲ್ಲಾ ಸಚಿವರೂ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಚಿವರಿಗೆ ಸಲಹೆ ಕೊಡಲಾಗಿದೆ. ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಕೂಡ ಔತಣಕೂಟದಲ್ಲಿ ಉಪಸ್ಥಿತರಿದ್ದರು. ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಎಸ್.ಎಸ್.ಮಲ್ಲಿಕಾರ್ಜುನ್, ರಹೀಂ ಖಾನ್, ಭೈರತಿ ಸುರೇಶ್, ಕೃಷ್ಣಭೈರೇಗೌಡ ಸೇರಿದಂತೆ ಕೆಲವು ಸಚಿವರ ಗೈರು ಹಾಜರಿ ಎದ್ದುಕಾಣುತ್ತಿತ್ತು.

RELATED ARTICLES

Latest News