Thursday, December 7, 2023
Homeರಾಜ್ಯಡಿಸಿಎಂ ಡಿಕೆಶಿ ನಿವಾಸದಲ್ಲಿ ಹತ್ತಕ್ಕೂ ಹೆಚ್ಚು ಶಾಸಕರ ಸಭೆ

ಡಿಸಿಎಂ ಡಿಕೆಶಿ ನಿವಾಸದಲ್ಲಿ ಹತ್ತಕ್ಕೂ ಹೆಚ್ಚು ಶಾಸಕರ ಸಭೆ

ಬೆಂಗಳೂರು,ನ.9- ಆಡಳಿತ ಪಕ್ಷದ ಶಾಸಕರಲ್ಲಿ ಇರುವ ಅಸಮಧಾನವನ್ನು ಹೋಗಲಾಡಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ನಿವಾಸದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಾಸಕರಿಗೆ ಲಭ್ಯವಾಗುತ್ತಿಲ್ಲ ಎಂಬ ಆಕ್ಷೇಪಗಳು ಇತ್ತೀಚೆಗೆ ಕೇಳಿ ಬರಲಾರಂಭಿಸಿದ್ದವು. ಜಿಲ್ಲೆಗಳ ಮಟ್ಟದಲ್ಲಿ ಸಚಿವರ ಜೊತೆಗೆ ಕೆಲ ಶಾಸಕರು ಅಸಮಧಾನ ಹೊರ ಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಶಾಸಕರು, ಸಚಿವರ ಭೇಟಿಗಾಗಿಯೇ ಪ್ರತ್ಯೇಕ ಕೊಠಡಿ ನಿರ್ಮಿಸಿದ್ದಾರೆ. ಡಿ.ಕೆ.ಶಿವಕುಮಾರ್ ತಮ್ಮ ಮನೆಯಲ್ಲಿ ಬೆಳಗ್ಗೆ ಒಂದು ಗಂಟೆ ಕಾಲ ಶಾಸಕರಿಗಾಗಿ ಸಮಯ ಮೀಸಲಿಟ್ಟಿದ್ದಾರೆ.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಇಂದು ಬೆಳಗ್ಗೆ ಸದಾಶಿವನಗರದ ನಿವಾಸದಲ್ಲಿ ಸಚಿವರಾದ ಶಿವಾನಂದ್ ಪಾಟೀಲ್, ಸಂತೋಷ್ ಲಾಡ್, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್, ಶಾಸಕರಾದ ಜಿ ಎಸ್ ಪಾಟೀಲ್, ತರೀಕೆರೆ ಶ್ರೀನಿವಾಸ್, ಶಾಂತನಗೌಡ, ದರ್ಶನ್ ಧ್ರುವನಾರಾಯಣ್, ರವಿಶಂಕರ್, ಮಾನಪ್ಪ ವಜ್ಜಲ್, ಡಾ ರಂಗನಾಥ್, ವಿಧಾನ ಪರಿಷತ್ ಸದಸ್ಯ ಸುನಿಲ್ ಪಾಟೀಲ್, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ್, ಶಿವರಾಮ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮತ್ತಿತರರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ವರ್ಗಾವಣೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಶಾಸಕರ ಅಹವಾಲುಗಳನ್ನು ಡಿ.ಕೆ.ಶಿವಕುಮಾರ್ ಅಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಲೋಕಸಭೆ ಚುನಾವಣೆಗ ತಯಾರಿಗಳನ್ನು ನಡೆಸುವಂತೆಯೂ ಶಾಸಕರಿಗೆ ಸಲಹೆ ನೀಡಿದ್ದಾರೆ.

RELATED ARTICLES

Latest News