Saturday, May 10, 2025
Homeರಾಜ್ಯತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆ ಬೇಡ ಎಂದ ಡಿಸಿಎಂ ಡಿಕೆಶಿ

ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆ ಬೇಡ ಎಂದ ಡಿಸಿಎಂ ಡಿಕೆಶಿ

DCM DK Shivakumar said that there is no need to celebrate his birthday

ಬೆಂಗಳೂರು,ಮೇ 10- ಭಯೋತ್ಪಾದನೆ ವಿರುದ್ಧ ನಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ ದಿನಾಚರಣೆ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ.

ನನ್ನ ಜನದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಜನದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.

RELATED ARTICLES

Latest News