ಮನೆ ನಿರ್ಮಾಣಕ್ಕೆ 5 ಲಕ್ಷ : ಡಿಸಿಎಂ ಕಾರಜೋಳ

Spread the love

ಬೆಂಗಳೂರು, ಸೆ.21- ಅತಿವೃಷ್ಟಿ ಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ ಮಾಡಲು 5 ಲಕ್ಷ ರೂ. ನೀಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತಡಿದ ಅವರು, ಅತಿವೃಷ್ಟಿಯಿಂದ ರಸ್ತೆ, ಸೇತುವೆ ಹಾನಿಯಾಗಿದೆ. ದುರಸ್ತಿಕಾರ್ಯ ನಡೆಯುತ್ತಿದೆ ಎಂದು ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕೊರೊನಾದಿಂದ ಎಲ್ಲರಿಗೂ ತೊಂದರೆಯಾಗಿದೆ. ಸರ್ಕಾರಕ್ಕೂ ನಿರೀಕ್ಷಿತ ಆದಾಯ ಬರುತ್ತಿಲ್ಲ. ಕೊರೊನಾ ಸಂಕಷ್ಟದ ನಡುವೆ ಸರ್ಕಾರ ಯಶಸ್ವಿಯಾಗಿ ಸಮಸ್ಯೆಗಳನ್ನು ಸರಿಪಡಿಸುತ್ತಿದೆ. ಸಮಸ್ಯೆ ಗಳ ನಡುವೆಯೇ ಸದನ ನಡೆಸಲಾಗುತ್ತಿದೆ ಎಂದರು.