Friday, November 22, 2024
Homeರಾಜ್ಯಲೋಕಸಭೆ ಚುನಾವಣೆಗೂ ಮೊದಲೇ ಡಿಸಿಎಂ ಹುದ್ದೆ ಕೊಡಿ : ಜಾರಕಿಹೊಳಿ

ಲೋಕಸಭೆ ಚುನಾವಣೆಗೂ ಮೊದಲೇ ಡಿಸಿಎಂ ಹುದ್ದೆ ಕೊಡಿ : ಜಾರಕಿಹೊಳಿ

ಬೆಂಗಳೂರು,ಜ.5- ಲೋಕಸಭೆ ಚುನಾವಣೆಗೂ ಮೊದಲೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದು ಸೂಕ್ತ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ತಮ್ಮ ಮನೆಯಲ್ಲಿ ನಡೆದ ಭೋಜನಾಕೂಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೇ ಪಕ್ಷದ ಸಚಿವರುಗಳು ಸಹಜವಾಗಿ ಕೂಟಕ್ಕೆ ಸೇರಿದ್ದೇವೆ. ಅದರಲ್ಲಿ ವಿಶೇಷವೇನಿಲ್ಲ. ರಾಜಕಾರಣಿಗಳು ಸೇರಿದರೆ ರಾಜಕಾರಣ ಚರ್ಚೆಯಾಗಿಯೇ ಆಗುತ್ತದೆ ಎಂದರು.

ನಮ್ಮ ಮುಂದೆ ಲೋಕಸಭೆ ಚುನಾವಣೆಯ ಸವಾಲಿದೆ. ಅದನ್ನು ನಿಭಾಯಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಚುನಾವಣೆಗೂ ಮೊದಲೇ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಿದರೆ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಅದರ ಹೊರತಾಗಿ ದಲಿತ ಮುಖ್ಯಮಂತ್ರಿ ಕುರಿತು ಚರ್ಚೆಯಾಗಿಲ್ಲ ಎಂದು ಹೇಳಿದರು.

15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ

ಇದೇ ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ, ಫೆಬ್ರವರಿಯಲ್ಲಿ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್ಟಿ ಸಮಾವೇಶ ಆಯೋಜನೆ ಮಾಡುವ ಚರ್ಚೆಗಳಾಗಿವೆ ಎಂದು ತಿಳಿಸಿದರು. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯ ಬಗ್ಗೆ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಅದು ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕವಷ್ಟೇ ಅದರ ಬಗ್ಗೆ ಮಾತನಾಡುತ್ತೇವೆ. ಸದ್ಯಕ್ಕೆ ಅದರ ಬಗ್ಗೆ ಒತ್ತಡ ಹೇರುವ ಸಂದರ್ಭವೂ ಇಲ್ಲ ಎಂದರು.

ಕರಸೇವಕರ ಬಂಧನದ ಪ್ರಕರಣ ರಾಜಕೀಯ ಅನಗತ್ಯ. ಇದೀಗ ಪಕ್ಷಗಳ ವ್ಯಾಪ್ತಿಗಳು ಮೀರಿ ಹೋಗಿವೆ. ಏನೇ ಆಗಬೇಕಿದ್ದರೂ ಅದು ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳಬೇಕು ಎಂದು ಹೇಳಿದರು.

RELATED ARTICLES

Latest News