ಮಹಾರಾಷ್ಟ್ರದ ಸಿಎಂ ಹೇಳಿಕೆ ಅವಿವೇಕಿತನ: ಡಿಸಿಎಂ ಲಕ್ಷ್ಮಣ ಸವದಿ

ದಾವಣಗೆರೆ, ಜ.18- ಮಹಾರಾಷ್ಟ್ರ ಸಿಎಂ ಹೇಳಿಕೆ ಅವಿವೇಕಿತನದ್ದು, ಏನಾದರೂ ಹೇಳುವಾಗ ಎಚ್ಚರಿಕೆ ಇರಬೇಕು, ಸಾವಿರ ಜನ ಸಿಎಂ ಬಂದ್ರೂ ಬೆಳಗಾವಿ ಕರ್ನಾಟಕದಲ್ಲೇ ಇರುತ್ತೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ. ಜಿಎಂಐಟಿ ಪ್ರವಾಸಿ ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ಬೆಳಗಾವಿ ನಿಪ್ಪಾಣಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಸಿದ್ದ ಎಂಬ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಎಂದೆಂದಿಗೂ ಬೆಳಗಾವಿ, ನಿಪ್ಪಾಣಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ. ಯಾವುದೇ ಕಾರಣಕ್ಕೂ ಅದು ಸಾಧ್ಯವಿಲ್ಲ ಎಂದು ತಿಳಿಸಿದರು.

ಹಿರಿಯರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ರೇಣುಕಾಚಾರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ಅವರ ವೈಯುಕ್ತಿತ ಅಭಿಪ್ರಾಯ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಕೇಳುವುದನ್ನು ಪಕ್ಷದ ಚೌಕಟ್ಟಿನಲ್ಲಿ ಕೇಳಲಿ, ರಾಜ್ಯಾಧ್ಯಕ್ಷರ ಮೂಲಕ ಅಭಿಪ್ರಾಯಗಳು ಬರಲಿ ಎಂದರು.

ಭರವಸೆ ನೀಡಿದಂತೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಪಕ್ಷದ ಚೌಕಟ್ಟಿನಲ್ಲಿ ಈ ಕಾರ್ಯ ನಡೆದಿದೆ. ಮುಂದಿನ ದಿನಗಳಲ್ಲಿ ಪ್ರದೇಶವಾರು ಸಚಿವ ಸ್ಥಾನದ ಚಿಂತನೆ ನಡೆಯಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.