ಕೊರೋನಾ 2ನೇ ಅಲೆ : ಜನರಿಗೆ ಅರಿವು ಮೂಡಿಸಿದ ಡಿಸಿಪಿ ಸಂಜೀವ್ ಪಾಟೀಲ್

ಬೆಂಗಳೂರು,ಏ.3- ರಾಜ್ಯದಲ್ಲಿ ಕೊರೊನಾ 2ನೇ ಅಲೆ ಜೋರಾಗಿರುವ ಕಾರಣ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ನಗರದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ವಿಭಾಗದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸಾನಿಟೈಸರ್ ಬಳಕೆ, ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೋಂಕು ತಡೆಗಟ್ಟುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.