Sunday, July 7, 2024
Homeಜಿಲ್ಲಾ ಸುದ್ದಿಗಳುನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಹುಲಿ ಮೃತ ದೇಹ ಪತ್ತೆ

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಹುಲಿ ಮೃತ ದೇಹ ಪತ್ತೆ

ಮೈಸೂರು,ಜೂ.13- ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಐದು ವರ್ಷದ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿದೆ.ನಾಗರಹೊಳೆ ಅರಣ್ಯ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ವ್ಯಾಪ್ತಿಯ ಗೋವಿಂದೇಗೌಡ ಕಂಡಿ ಬಳಿ ಅರಣ್ಯ ಸಿಬ್ಬಂದಿಗಳು ಗಸ್ತಿನ ವೇಳೆ ಹುಲಿ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಅರಣ್ಯಾಧಿ ಕಾರಿಗಳು ಭೇಟಿ ಪರಿಶೀಲನೆ ನಡೆಸಿದರು.ಎರಡು ಹುಲಿಗಳ ನಡುವೆ ಕಾದಾಟ ನಡೆದು ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹುಲಿಯ ಮೃತದೇಹವನ್ನು ಎನ್‌ಟಿಸಿಎ ಮಾರ್ಗಸೂಚಿಯಂತೆ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ಸಿಬ್ಬಂದಿ ಸುಟ್ಟುಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES

Latest News