ನನಗೆ ಪ್ರಾಣ ಬೆದರಿಕೆ ಇದೆ, ಭದ್ರತೆ ಕೊಡಿ : ಪರಿಷತ್‍ನ ವಿಪಕ್ಷ ನಾಯಕ ಹರಿಪ್ರಸಾದ್

Social Share

ಬೆಂಗಳೂರು,ಫೆ.19- ತಮಗೆ ಪ್ರಾಣ ಬೆದರಿಕೆ ಇದ್ದು ಸೂಕ್ತ ಭದ್ರತೆ ಒದಗಿಸಬೇಕು ಎಂದು ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಹರಿಪ್ರಸಾದ್ ಅವರಿಗೆ ತಕ್ಕ ಪಾಠ ಕಲಿಸಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಇದೇ ರೀತಿಯ ಪ್ರಚೋದನೆಯಿಂದಾಗಿ ಹಿಂದೆ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯಾಗಿತ್ತು. ತಮ್ಮ ವಿರುದ್ಧ ಕೂಡ ಆ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ. ಇಂದು ನಾಳೆ ಅಹೋರಾತ್ರಿ ಧರಣಿ ನಡೆಸಿ ಸೋಮವಾರದ ಕಲಾಪದಲ್ಲೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಅವರು ಸ್ಪಷ್ಟನೆ ನೀಡಿದರು.

Articles You Might Like

Share This Article