ನವದೆಹಲಿ,ನ.11– ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆಕ್ಕೆ 12ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯ ಗೊಂಡು ದೆಹಲಿಯ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ.
ಹೀಗಾಗಿ ಬಾಂಬ್ ಸ್ಫೋಟಕ್ಕೆ ಒಟ್ಟು 12 ಮಂದಿ ಕೊನೆಯುಸಿರೆಳೆದಿದ್ದಾರೆ. ಹುಂಡೈ ಕಾರಿನಲ್ಲಿ ಸ್ಫೋಟಗೊಂಡು 9 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇವರನ್ನು ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ದೇಹದ ಕೆಲವು ಭಾಗಗಳು ತೀವ್ರ ಹಾನಿಯಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮತ್ತೆ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಸ್ಫೋಟವಾದ ಕಾರಿಗೆ ಪುಲ್ವಾಮಾ ಸಂಪರ್ಕ
ನವದೆಹಲಿ,ನ.11- ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆ ಭರದಿಂದ ಸಾಗಿದ್ದು, ಗುರುಗ್ರಾಮ್ ನೋಂದಣಿ ಸಂಖ್ಯೆಯನ್ನು ಹೊಂದಿರುವ ಬಿಳಿ ಹುಂಡೈ ಐ20 ಕಾರು ಕೊನೆಯದಾಗಿ ಜಮು ಮತ್ತು ಕಾಶೀರದ ಪುಲ್ವಾಮಾ ನಿವಾಸಿಯೊಬ್ಬರಿಗೆ ಸೇರಿತ್ತು ಎಂದು ತಿಳಿದುಬಂದಿದೆ.
ದೆಹಲಿ ಪೊಲೀಸರ ಮಾಹಿತಿಯ ಆಧಾರದ ಮೇಲೆ, ಗುರುಗ್ರಾಮ್ ಪೊಲೀಸರು ಗುರ್ಗಾಂವ್ ನಿವಾಸಿ ಮೊಹಮ್ಮದ್ ಸಲ್ಮಾನ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದರು. ಸಲ್ಮಾನ್ ಸುಮಾರು ಒಂದೂವರೆ ವರ್ಷಗಳ ಹಿಂದೆ ಆಗ್ನೇಯ ದೆಹಲಿಯ ಓಖ್ಲಾ ನಿವಾಸಿ ದೇವೇಂದ್ರ ಎಂಬುವವರಿಗೆ ಕಾರನ್ನು ಮಾರಾಟ ಮಾಡಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದು, ಮಾರಾಟಕ್ಕೆ ಸಂಬಂಽಸಿದ ಎಲ್ಲಾ ದಾಖಲೆಗಳನ್ನು ಗುರುಗ್ರಾಮ್ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ವಹಿವಾಟು ಮತ್ತು ಮಾಲೀಕತ್ವದ ಹಾದಿಯ ವಿವರಗಳನ್ನು ಪರಿಶೀಲಿಸಲಾಗುತ್ತಿದ್ದು, ಕೇಂದ್ರ ಭದ್ರತಾ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ತನಿಖಾಽಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಕಾರನ್ನು ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ತಾರಿಕ್ ಎಂಬ ವ್ಯಕ್ತಿ ಖರೀದಿ ಮಾಡಿದ್ದಾರೆ. ಸೋಟದ ನಂತರ ರಾಷ್ಟ್ರವ್ಯಾಪಿ ಎಚ್ಚರಿಕೆಯನ್ನು ನೀಡಲಾಗಿದ್ದು, ಜನದಟ್ಟಣೆಯ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
