ಬೆಂಗಳೂರು,ಡಿ.24- ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಇದೇ 30ರಂದು ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದೆ. ಹಳೆ ಮೈಸೂರು ಭಾಗದಲ್ಲಿ ಪ್ರಮುಖ ರಾಜಕೀಯ ಜಿದ್ದಜಿದ್ದಿನ ಜಿಲ್ಲೆಯಾದ ಮಂಡ್ಯ ಜಿಲ್ಲೆಯಲ್ಲಿ 5ರಿಂದ 6 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದ್ದು ಈ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ.
ಮನ್ಮುಲ್ನ ಮೆಗಾ ಡೈರಿ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಬರುತ್ತಿರುವ ಅಮಿತ್ ಶಾ ಪಕ್ಷದ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.
ಸೋಮವಾರದೊಳಗೆ ಬೂತ್ ಮಟ್ಟದ ಏಜೆಂಟರ ಪಟ್ಟಿ ನೀಡುವಂತೆ ಸೂಚನೆ
ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಕನಿಷ್ಟ ಐದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಹೈಕಮಾಂಡ್ನಿಂದ ರಾಜ್ಯದ ನಾಯಕರಿಗೆ ಸೂಚನೆ ಬಂದಿದೆ. ಈ ಕಾರಣದಿಂದ ರಾಜ್ಯದ ನಾಯಕರು ಮಂಡ್ಯ ಜಿಲ್ಲೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.
ಮಂಡ್ಯದ ಬಾಲಕರ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಒಂದು ಲಕ್ಷ ಜನರನ್ನು ಸೇರಿಸುವ ಉದ್ದೇಶ ಹೊಂದಲಾಗಿದೆ. ಈ ಸಮಾವೇಶದ ನಂತರ ಮಂಡ್ಯದಲ್ಲೇ ಅಮಿತ್ ಶಾ ಸಭೆ ನಡೆಸಿ ಚುನಾವಣೆ ತಂತ್ರಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ.
December 30, Amit Shah, arrives, Mandya,