Saturday, December 14, 2024
Homeಬೆಂಗಳೂರುಬಿಬಿಎಂಪಿ ವಿಶೇಷ ಆಯುಕ್ತರಾಗಿರುವ ಡಾ.ಸವಿತಾ ವಿರುದ್ಧ ಮಾನನಷ್ಟ ಮೊಕದ್ದಮೆ

ಬಿಬಿಎಂಪಿ ವಿಶೇಷ ಆಯುಕ್ತರಾಗಿರುವ ಡಾ.ಸವಿತಾ ವಿರುದ್ಧ ಮಾನನಷ್ಟ ಮೊಕದ್ದಮೆ

ಬೆಂಗಳೂರು,ಏ.13- ತಮ್ಮ ವಿರುದ್ಧ ಸುಳ್ಳು ದೂರು ನೀಡಿದ್ದ ಬಿಬಿಎಂಪಿ ವಿಶೇಷ ಆಯುಕ್ತರಾಗಿರುವ ಡಾ.ಸವಿತಾ ಅವರ ವಿರುದ್ದ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ರಾಜ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಈ ಹಿಂದೆ ಸವಿತಾ ಅವರು ಪೂರ್ವ ವಲಯದ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅವರು ಅಮೃತ್ರಾಜ್ ಅವರ ವಿರುದ್ಧದ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪೊಲೀಸರಿಗೆ ದುರುದ್ದೇಶಪೂರ್ವಕ ದೂರು ನೀಡಿದ್ದರು.

ತಾವು ನೀಡಿದ ದೂರಿನಲ್ಲಿ ಅವರು ಅಮೃತ್ರಾಜ್ ವಿರುದ್ಧ ಸಾಕಷ್ಟು ಕ್ರಿಮಿನಲ್ ಪ್ರಕರಣಗಳು ಇರುವುದಾಗಿ ಆರೋಪಿಸಿದ್ದರು.ತಮ್ಮ ವಿರುದ್ಧ ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಅಮೃತ್ರಾಜ್ ಅವರು ಇದೀಗ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಸವಿತಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಅಮೃತ್ರಾಜ್ ಹೂಡಿರುವ ಮಾನನಷ್ಟ ಮೊಕದ್ದಮೆ ಯನ್ನು ವಿಚಾರಣೆಗೆ ಅಂಗಿಕರಿಸಿರುವ ನ್ಯಾಯಾಲಯ ಡಾ. ಸವಿತಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಮಾತ್ರವಲ್ಲ, ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.

RELATED ARTICLES

Latest News