ತಮ್ಮ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿದವನ ವಿರುದ್ಧ ದೂರು ನೀಡಿದ ಪ್ರತಿಭಾ ಕುಳಾಯಿ

Social Share

ಮಂಗಳೂರು,ಅ.23-ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಅಶ್ಲೀಲ ಹಾಗೂ ಮಾನಹಾನಿ ವಿಡಿಯೋ ಮತ್ತು ಚಿತ್ರಗಳನ್ನು ಪ್ರಕಟಿಸಿದ ವ್ಯಕ್ತಿ ವಿರುದ್ಧ ಪ್ರತಿಭಾ ಕುಳಾಯಿ ದೂರು ನೀಡಿದ್ದಾರೆ. ಅ.18ರಂದು ಸೂರತ್ಕಲ್‍ನ ಟೋಲ್‍ಗೇಟ್ ವಿರುದ್ಧ ಪ್ರತಿಭಟನೆ ವೇಳೆಯ ಫೋಟೋ ಹಾಗೂ ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಲಾಗಿದೆ.

ನಂತರ ಶ್ಯಾಮಸುದರ್ಶನ್ ಭಟ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹರಿಯಬಿಟ್ಟಿದ್ದಾರೆ. ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದ್ದು ಮಾನ ಹಾನಿಯಾಗಿದೆ ಎಂದು ಅವರು ದೂರು ನೀಡಿದ್ದಾರೆ.

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ

ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ಕಾರ್ಯಚರಣೆ ನಡೆಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Articles You Might Like

Share This Article