Monday, May 5, 2025
Homeರಾಷ್ಟ್ರೀಯ | Nationalಕುತೂಹಲ ಕೆರಳಿಸಿದ ಕೇಂದ್ರ ರಕ್ಷಣಾ ಕಾರ್ಯದರ್ಶಿ ರಾಜೇಶ್‌ ಕುಮಾರ್‌-ಮೋದಿ ಭೇಟಿ

ಕುತೂಹಲ ಕೆರಳಿಸಿದ ಕೇಂದ್ರ ರಕ್ಷಣಾ ಕಾರ್ಯದರ್ಶಿ ರಾಜೇಶ್‌ ಕುಮಾರ್‌-ಮೋದಿ ಭೇಟಿ

Defence Secretary meets PM Modi, briefs him on India's readiness

ನವದೆಹಲಿ,ಮೇ5-ಭಾರತ ಮತ್ತು ಪಾಕಿಸ್ತಾನ ನಡುವೆ ದಿನದಿಂದ ದಿನಕ್ಕೆ ಪರಿಸ್ಥಿತಿ ಉದ್ವಿಗ್ನಗೊಂಡು ಯಾವುದೇ ಕ್ಷಣದಲ್ಲಿ ಉಭಯ ರಾಷ್ಟ್ರಗಳ ನಡುವೆ ಯುದ್ಧ ಸಂಭವಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಂದ್ರ ರಕ್ಷಣಾ ಕಾರ್ಯದರ್ಶಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಭಾರೀ ಕುತೂಹಲ ಕೆರಳಿಸಿದೆ.

ಏಪ್ರಿಲ್‌ 22 ರ ಪಹಲ್ಗಾಮ್‌ ದಾಳಿಯ ನಂತರ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ರಕ್ಷಣಾ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ವಿಶೇಷ ಎಂದರೆ. ಏರ್‌ ಸ್ಟಾಫ್‌ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ಎಪಿ ಸಿಂಗ್‌ ಮತ್ತು ನೌಕಾಪಡೆ ಮುಖ್ಯಸ್ಥ ಅಡಿರಲ್‌ ದಿನೇಶ್‌ ಕೆ ತ್ರಿಪಾಠಿ ಅವರು ಪ್ರಧಾನಮಂತ್ರಿ ಅವರನ್ನು ಭೇಟಿಯಾಗಿ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಸನ್ನದ್ಧತೆಯ ಬಗ್ಗೆ ವಿವರಿಸಿದ ನಂತರ ಈ ಸಭೆ ನಡೆದಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಸೋಮವಾರ, ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಜಮುವಿನ ಅಂತರರಾಷ್ಟ್ರೀಯ ಗಡಿಯಾದ್ಯಂತ ಹಲವಾರು ವಲಯಗಳಲ್ಲಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಈ ಪ್ರದೇಶಗಳಲ್ಲಿ ಪಾಕಿಸ್ತಾನಿ ಪಡೆಗಳು ಅಪ್ರಚೋದಿತ ಸಣ್ಣ ಶಸಾ್ತ್ರಸ್ತ್ರಗಳ ಗುಂಡಿನ ದಾಳಿ ನಡೆಸುತ್ತಿವೆ ಎಂದು ಭಾರತೀಯ ಸೇನೆಯ ಹೇಳಿಕೆ ಆರೋಪಿಸಿದೆ. ಭಾರತೀಯ ಸೇನೆಯು ತಕ್ಷಣವೇ ಮತ್ತು ಪ್ರಮಾಣಾನುಗುಣವಾಗಿ ಪ್ರತಿಕ್ರಿಯಿಸಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗಿನ ದೇಶದ ಉದ್ವಿಗ್ನತೆಯನ್ನು ಶಮನ ಮಾಡಲು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌‍ ಅರಾಘ್ಚಿ ಸೋಮವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. ಪಾಕಿಸ್ತಾನಿ ಸಹವರ್ತಿ ಇಶಾಕ್‌ ದಾರ್‌ ಮತ್ತು ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ಮತ್ತು ಪ್ರಧಾನಿ ಶೆಹಬಾಜ್‌ ಷರೀಫ್‌ ಅವರನ್ನು ಭೇಟಿಯಾಗಲಿದ್ದಾರೆ.

ಪಾಕ್‌ ಗೆ ಗುದ್ದು ಮತ್ತೊಂದೆಡೆ ಪಾಕ್‌ ಗೆ ರಾಜತಾಂತ್ರಿಕತೆ ಮೂಲಕವೇ ತಿರುಗೇಟು ನೀಡಲು ಮುಂದಾಗಿರುವ ಭಾರತ, ಕಾಶೀರದ ಹಿಮಾಲಯ ಪ್ರದೇಶದಲ್ಲಿ ಒಟ್ಟು 6 ಜಲವಿದ್ಯುತ್‌ ಯೋಜನೆಗಳನ್ನು ಪ್ರಾರಂಭಿಸಲು ಮುಂದಾಗಿದೆ.

ಈ ಪ್ರದೇಶದಲ್ಲಿ ಅರ್ಧ ಡಜನ್‌ಗಿಂತಲೂ ಹೆಚ್ಚು ಯೋಜನೆಗಳಿವೆ. 1987 ಮತ್ತು 2008/09 ರಲ್ಲಿ ನಿರ್ಮಿಸಿದ ನಂತರ ಮೊದಲ ಬಾರಿಗೆ ಸಲಾಲ್‌ ಮತ್ತು ಬಗ್ಲಿಹಾರ್‌ ಯೋಜನೆಗಳ ಕೆಲಸದ ಬಗ್ಗೆ ಭಾರತವು ಪಾಕಿಸ್ತಾನಕ್ಕೆ ತಿಳಿಸಿರಲಿಲ್ಲ. ಏಕೆಂದರೆ ಒಪ್ಪಂದವು ಅಂತಹ ಕೆಲಸವನ್ನು ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

1947 ರಲ್ಲಿ ಬ್ರಿಟಿಷ್‌ ವಸಾಹತುಶಾಹಿ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ನಂತರ, ಭಾರತ ಮತ್ತು ಪಾಕಿಸ್ತಾನಗಳು ಕಾಶೀರದ ಮೇಲೆ ತಮ ಮೂರು ಯುದ್ಧಗಳಲ್ಲಿ ಎರಡನ್ನು ಹೋರಾಡಿವೆ, ಜೊತೆಗೆ ಹಲವಾರು ಸಣ್ಣ ಘರ್ಷಣೆಗಳು ನಡೆದಿವೆ. ಫ್ಲಶಿಂಗ್‌ ಕಾರ್ಯಾಚರಣೆಯು ಮೇ 1 ರಿಂದ ಮೂರು ದಿನಗಳವರೆಗೆ ನಡೆದಿದೆ.

ಪಾಕ್‌ ಗೆ ಜಲಬಾಂಬ್‌ ಗುನ್ನ
ಪಹಲ್ಗಾಮ್‌ ಭೀಕರ ನರಮೇಧಕ್ಕೆ ಪ್ರತಿಯಾಗಿ ಭಾರತ ಈಗ ಪಾಕಿಸ್ತಾನದ ಬುಡಕ್ಕೆ ಜಲಬಾಂಬ್‌ ಹಾಕಿದೆ. ಸಿಂಧೂ ನದಿಯ ಒಪ್ಪಂದವನ್ನು ಭಾರತ ಅಮಾನತಿನಲ್ಲಿಟ್ಟ ಬೆನ್ನಲ್ಲೇ ಚೆನಾಬ್‌ ನದಿಗೆ ಜಲಾಶಯಗಳಿಂದ ನೀರು ಹರಿಸುವುದನ್ನೇ ನಿಲ್ಲಿಸಿದೆ. ಚೆನಾಬ್‌ ನದಿಗೆ ಅಡ್ಡಲಾಗಿ ರಾಮಬನದಲ್ಲಿ ಬಗ್ಲಿಹಾರ್‌ ಮತ್ತು ರಿಯಾಸಿಯಲ್ಲಿ ಸಲಾಲ್‌ ಜಲವಿದ್ಯುತ್‌ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗಿದೆ. ಈಗ ಈ ಎರಡು ಅಣೆಕಟ್ಟಿನಿಂದ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ.

ಜಮು ಮತ್ತು ಕಾಶೀರದ ಝೀಲಂ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಶನ್‌ಗಂಗಾ ಅಣೆಕಟ್ಟಿನಿಂದಲೂ ನೀರು ಹರಿಸುವುದನ್ನು ನಿಲ್ಲಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.ಸರ್ಕಾರ ಪಾಕಿಸ್ತಾನಕ್ಕೆ ನೀರು ಹರಿಯುವುದನ್ನು ನಿಲ್ಲಿಸಿದ್ದಕ್ಕೆ ನಮಗೆ ಸಂತೋಷವಾಗಿದೆ. ಪಾಕಿಸ್ತಾನ ಪಹಲ್ಗಾಮ್‌ನಲ್ಲಿ ನಮ ಪ್ರವಾಸಿಗರನ್ನು ಕೊಂದ ರೀತಿಗೆ ಸೂಕ್ತ ಉತ್ತರ ನೀಡಬೇಕು. ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರದಲ್ಲಿ ನಾವು ಅದರೊಂದಿಗಿದ್ದೇವೆ ಎಂದು ಮಾಧ್ಯಮಕ್ಕೆ ಸ್ಥಳೀಯ ವ್ಯಕ್ತಿ ದಿನೇಶ್‌ ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಬಗ್ಲಿಹಾರ್‌ ಜಲಾಶಯ ಮೇಲ್ಭಾಗದಲ್ಲಿ ಭಾರಿ ಮಳೆಯಾಗಿದ್ದರಿಂದ ನೀರು ಹರಿಸಲು ಗೇಟ್‌ ತೆಗೆಯಲಾಗಿತ್ತು. ಇದರಿಂದ ತಗ್ಗು ಪ್ರದೇಶವಾಗಿರುವ ರಿಯಾಸಿ ಮತ್ತು ಅಖ್ನೂರ್‌ನ ತಗ್ಗು ಪ್ರದೇಶಗಳಲ್ಲಿ ಪ್ರವಾಹ ನಿರ್ಮಾಣವಾಗಿತ್ತು. ಪಾಕಿಸ್ತಾನದಲ್ಲೂ ಸ್ವಲ್ಪ ಸಮಸ್ಯೆಯಾಗಿತ್ತು. ಇಂದು ಬೆಳಗ್ಗೆ ಬಗ್ಲಿಹಾರ್‌ ಅಣೆಕಟ್ಟಿನ ಗೇಟ್‌ಗಳನ್ನು ಮುಚ್ಚಿದ್ದರಿಂದ ನೀರಿನ ಹರಿವು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರೊಂದಿಗೆ ರಾಮಬನ್‌ನಲ್ಲಿರುವ ಚೆನಾಬ್‌ ನದಿ ಪಾತ್ರ ಮತ್ತು ಜಲಾಶಯದ ಕೆಳಭಾಗ ಸಂಪೂರ್ಣವಾಗಿ ಬತ್ತಿ ಹೋದಂತೆ ಕಾಣುತ್ತಿದೆ.

ರಿಯಾಸಿಯಲ್ಲಿರುವ ಸಲಾಲ್‌ ಅಣೆಕಟ್ಟಿನಿಂದ ನೀರಿನ ಹರಿವು ಕಡಿಮೆಯಾಗಿದೆ ಮತ್ತು ಅಖ್ನೂರ್‌ ಮತ್ತು ಜೌರಿಯನ್‌ನಲ್ಲಿ ನೀರಿನ ಮಟ್ಟವೂ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಪಾಕಿಸ್ತಾನದಲ್ಲಿ ನೀರಿನ ಬಿಕ್ಕಟ್ಟನ್ನು ಉಲ್ಬಣಗೊಳಿಸುವ ಸಾಧ್ಯತೆಯಿದೆ. ಅಖ್ನೂರ್‌ ಪ್ರದೇಶದಲ್ಲಿ ನೀರಿನ ಮಟ್ಟ ಭಾರೀ ಇಳಿಕೆಯಾಗಿದ್ದು ಜನರು ಮೊದಲ ಬಾರಿಗೆ ನದಿಯನ್ನು ದಾಟುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

RELATED ARTICLES

Latest News