ಬೆಂಗಳೂರು,ಮೇ 30-ರೈತರ ಆತಹತ್ಯೆ ಪ್ರಕರಣಗಳಲ್ಲಿ ಪರಿಹಾರ ಪಾವತಿಗೆ ವಿಳಂಬವಾಗುತ್ತಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲಾವಾರು ರೈತರ ಆತಹತ್ಯೆ ಅಂಕಿ ಅಂಶಗಳನ್ನು ಪರಿಶೀಲಿಸಿದರು.
ಹಾವೇರಿ ಸೇರಿ ಇನ್ನೆರಡು ಜಿಲ್ಲೆಗಳಲ್ಲಿ ಒಟ್ಟು 13 ರೈತ ಆತಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ಗಮನಿಸಿ ಸಿಟ್ಟಾದರು. ಆದಷ್ಟು ಬೇಗ ಪರಿಹಾರ ಪಾವತಿಸಿ ಎಂದು ಸೂಚನೆ ನೀಡಿದರು. ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಆದರೆ ಇದರಲ್ಲಿ ನಿರೀಕ್ಷಿತ ಪ್ರಗತಿ ಏಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಸುಮಾರು ಶೇ.74ರಷ್ಟು ಬಿಪಿಎಲ್ ಕಾರ್ಡುಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸವಲತ್ತು ಒದಗಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ ಇವರೆಗೂ ಇದು ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಹೊಸದಾಗಿ ಘೋಷಣೆ ಮಾಡಿರುವ ಎಲ್ಲಾ ಇಂದಿರಾ ಕ್ಯಾಂಟೀನ್ಗಳು ಶೀಘ್ರ ಕಾರ್ಯಾರಂಭ ಮಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಂದಿರಾ ಕ್ಯಾಂಟೀನ್ಗಳಿಗೆ ಇನ್ನೂ 5ಕಡೆ ಸ್ಥಳ ಗುರುತಿಸಬೇಕಾಗಿದೆ.
ತಕ್ಷಣ ನಿವೇಶನ ಗುರುತಿಸಬೇಕು. ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಎಲ್ಲಾ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಸಿ, ಡಿಸಿ ತಹಶೀಲ್ದಾರ್ ಕೋರ್ಟ್ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ ಎಸಿ ಮತ್ತು ಡಿಸಿ ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ತರಾಟೆಗೆ ತೆಗೆದುಕೊಂಡರು.
ನ್ಯಾಯ ದಾನ ವಿಳಂಬ, ನ್ಯಾಯ ನಿರಾಕರಣೆ ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದ ಅವರು, ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ. ಅಗತ್ಯವಿದ್ದರೆ ಹೇಳಿ ಹೆಚ್ಚುವರಿ ಡಿಸಿ, ಎಸಿಗಳನ್ನು ಕೊಡಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.