ನವದೆಹಲಿ,ಡಿ.10- ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತ ರಾಜೀನಾಮೆ ನೀಡಿದ್ದು, ಉಪಾಧ್ಯಕ್ಷ ವೀರೇಂದ್ರ ಸಚ್‍ದೇವ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ದೆಹಲಿ ಪಾಲಿಕೆಯಲ್ಲಿ ಬಿಜೆಪಿ ಸತತವಾಗಿ 5 ವರ್ಷಗಳಿಂದ ಅಧಿಕಾರ ಹಿಡಿದಿತ್ತು. ಕಳೆದ ಬುಧವಾರ ಪ್ರಕಟಿತ ಫಲಿತಾಂಶದಲ್ಲಿ ಆಪ್ ಪಕ್ಷ 134 ವಾರ್ಡ್‍ಗಳನ್ನು ಗೆದ್ದಿದ್ದು, ಬಿಜೆಪಿ 104 ಸ್ಥಾನಗಳನ್ನು ಗೆದ್ದಿದೆ.
ಈ ಸೋಲಿನ ನೈತಿಕ ಹೊಣೆ ಹೊತ್ತು ಆದೇಶ್ ಗುಪ್ತ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಬಹುಭಾಷಾ ನಟ ಶರತ್‍ಕುಮಾರ್ ಆಸ್ಪತ್ರೆಗೆ ದಾಖಲು
ಮುಂದಿನ ಆದೇಶದವರೆಗೂ ವೀರೇಂದ್ರ ಅವರು ಹಂಗಾಮಿ ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಲವಂತದ ಮತಾಂತರ : ಪಾಕ್ ಮೌಲಾನಗಳಿಗೆ ಬ್ರಿಟನ್ ನಿಷೇಧ
Delhi, BJP chief ,Adesh Gupta, Resigns,