Friday, May 24, 2024
Homeರಾಷ್ಟ್ರೀಯಬಂಧನ ಪ್ರಶ್ನಿಸಿದ್ದ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಂಧನ ಪ್ರಶ್ನಿಸಿದ್ದ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನವದೆಹಲಿ,ಏ.10- ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅರವಿಂದ ಕೇಜ್ರಿವಾಲ್ ಅವರ ಬಂಧನವು ಕಾನೂನು ನಿಬಂಧನೆಗೆ ವಿರುದ್ದವಾಗಿಲ್ಲ. ಹೀಗಾಗಿ ಅವರ ರಿಮ್ಯಾಂಡ್ ಅನ್ನು ಕಾನೂನು ಬಾಹಿರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರು ತೀರ್ಪಿನಲ್ಲಿ ಹೇಳಿದ್ದಾರೆ.

ತನ್ನ ತೀರ್ಪನ್ನು ಪ್ರಕಟಿಸುವಾಗ, ಜಾರಿ ನಿರ್ದೇಶನಾಲಯವು ಹಂಚಿಕೊಂಡ ವಿಷಯದ ಪ್ರಕಾರ, ಅರವಿಂದ್ ಕೇಜ್ರಿವಾಲ್ ಅವರು ಇತರರೊಂದಿಗೆ ಪಿತೂರಿ ನಡೆಸಿದ್ದಾರೆ ಮತ್ತು ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಹೈಕೋರ್ಟ್ ಗಮನಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ಇತರರೊಂದಿಗೆ ಪಿತೂರಿ ನಡೆಸಿದ್ದಾರೆ ಮತ್ತು ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹಂಚಿಕೊಂಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
ರದ್ದುಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್‍ಬ್ಯಾಕ್‍ಗೆ ಬೇಡಿಕೆಯಿಡುವಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ಪೂರಕ ಸಾಕ್ಷ್ಮಧಾರಗಳಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ತನಿಖಾ ಸಂಸ್ಥೆ ಯಾರನ್ನು ಬೇಕಾದರೂ ತನಿಖೆ ನಡೆಸಬಹುದು ಎಂದು ನ್ಯಾಯಾಲಯ ಹೇಳಿದೆ. ಅಮಾನತುಲ್ಲಾ ಖಾನ್ ಅವರ ಪ್ರಕರಣದ ಉದಾಹರಣೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ಸಾರ್ವಜನಿಕ ವ್ಯಕ್ತಿಗಳನ್ನು ಸಹ ಬಿಡಬಾರದು. ನಾವು ವಿಚಾರಣಾ ನ್ಯಾಯಾಲಯವನ್ನು ಬದಲಿಸಲು ಸಾಧ್ಯವಿಲ್ಲ. ಕೇಜ್ರಿವಾಲ್ ಅವರನ್ನು ವಿಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಬಹುದಿತ್ತು ಎಂಬ ವಾದವನ್ನು ತಿರಸ್ಕರಿಸಲಾಗಿದೆ. ತನಿಖೆ ಹೇಗೆ ನಡೆಸಬೇಕು ಎಂಬುದನ್ನು ನಿರ್ಧರಿಸುವುದು ಆರೋಪಿಗಳ ಕೆಲಸವಲ್ಲ. ಇದು ಆರೋಪಿಯ ಅನುಕೂಲಕ್ಕೆ ತಕ್ಕಂತೆ ಇರುವಂತಿಲ್ಲ ಎಂದಿದೆ.

ಕೇಜ್ರಿವಾಲ್ ಮಾರ್ಚ್‍ನಿಂದ ಸಮನ್ಸ್ ನಿರ್ಲಕ್ಷಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಹೀಗಿರುವಾಗ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಂಧನ ಮಾಡಲಾಗಿದೆ ಎಂದು ಹೇಳಲಾಗದು. ನ್ಯಾಯಾಲಯವು ಕಾನೂನಿಗೆ ಬದ್ಧವಾಗಿದೆ, ರಾಜಕೀಯದಿಂದಲ್ಲ. ನ್ಯಾಯಾೀಶರು ಸಂವಿಧಾನಕ್ಕೆ ಬದ್ಧರಾಗಿದ್ದಾರೆ. ನ್ಯಾಯಾಂಗದ ಕೆಲಸವೆಂದರೆ ಕಾನೂನನ್ನು ಅರ್ಥೈಸುವುದು ಮತ್ತು ಇದರಲ್ಲಿ ಅದು ಯಾರ ಪರವಾಗಿಯೂ ನಿಲ್ಲುವುದಿಲ್ಲ, ರಾಜಕೀಯದಲ್ಲಿ ತೊಡಗುವುದಿಲ್ಲ. ರಾಜಕೀಯ ವ್ಯಕ್ತಿಗಳ ಪ್ರಕರಣಗಳಲ್ಲಿ ನ್ಯಾಯಾಲಯವು ಕಾನೂನಿನತ್ತ ಮಾತ್ರ ನೋಡಬೇಕು ಮತ್ತು ಅದಕ್ಕೆ ರಾಜಕೀಯ ಅಗತ್ಯವಿಲ್ಲ.

ನ್ಯಾಯಾಲಯದ ಕಾಳಜಿ ಸಾಂವಿಧಾನಿಕ ನೈತಿಕತೆಯೇ ಹೊರತು, ರಾಜಕೀಯ ನೈತಿಕತೆಯಲ್ಲ. ಈ ಪ್ರಕರಣದಲ್ಲಿ ನ್ಯಾಯಾಲಯವು ಕಾನೂನು ಸಂಗತಿಗಳನ್ನು ಮಾತ್ರ ಪರಿಗಣಿಸಿದೆ ಎಂದಿದೆ. ಕೇಜ್ರಿವಾಲ್ ಮಾರ್ಚ್ 23 ರಂದು ತಮ್ಮ ಬಂಧನವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 3 ರಂದು ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದಕ್ಕೂ ಮೊದಲು ಏಪ್ರಿಲ್ 1 ರಂದು ರೂಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರ ಅರ್ಜಿಯನ್ನು ತಿರಸ್ಕರಿಸಿ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧಿಸಿತ್ತು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇದೀಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ, ಹೈಕೋರ್ಟ್ ಆದೇಶದ ಪ್ರತಿ ಕೈಗೆ ಸಿಕ್ಕ ತಕ್ಷಣ, ಆದಷ್ಟು ಬೇಗ ಸುಪ್ರೀಂನಲ್ಲಿ ಪ್ರಶ್ನಿಸುವುದಾಗಿ ಕೇಜ್ರಿವಾಲ್ ಪರ ವಕೀಲರು ಹೇಳಿದ್ದಾರೆ. ಇನ್ನು ಎಎಪಿ ಮೂಲಗಳು ಸುಪ್ರೀಂಕೋರ್ಟ್‍ಗೆ ಹೋಗುವುದಾಗಿ ಹೇಳಿದ್ದು, ನಮಗೆ ಅಲ್ಲಿ ನ್ಯಾಯ ಸಿಗುತ್ತದೆ ಎಂದು ವಿಶ್ವಾಸ ಕೂಡಾ ವ್ಯಕ್ತಪಡಿಸಿದ್ದಾರೆ.

ಸದ್ಯ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾರ್ಚ್ 21 ರ ರಾತ್ರಿ ಅವರನ್ನು ಬಂಸಲಾಗಿತ್ತು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ನೀಡಿತು, ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 01 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.

ಎಎಸ್ಜಿ ಎಸ್ವಿ ರಾಜು ಇಡಿಯನ್ನು ಪ್ರತಿನಿಸಿದ್ದರು. ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಂದ್ರ ತನಿಖಾ ಸಂಸ್ಥೆಯು ಸೆಕ್ಷನ್ 50 ಪಿಎಂಎಲ್‍ಎಗೆ ಅನುಗುಣವಾಗಿಲ್ಲ ಎಂದು ವಾದಿಸಿದರು, ಅದು ಸಮನ್ಸ್ ನೀಡಲು, ಸಾಕ್ಷ್ಯ ಸಂಗ್ರಹಿಸಲು ಇತ್ಯಾದಿಗಳಿಗೆ ಅಧಿಕಾರ ನೀಡುತ್ತದೆ.ಜಾರಿ ನಿರ್ದೇಶನಾಲಯವು ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಮದ್ಯ ನೀತಿ ಪ್ರಕರಣದ ಕಿಂಗ್‍ಪಿನ್ ಎಂದು ಕರೆದಿದೆ ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯದ ಹಿಂದಿನ ಆದೇಶದ ಪ್ರಕಾರ ಏಪ್ರಿಲ್ 15 ರವರೆಗೆ ತಿಹಾರ್ ಜೈಲಿನಲ್ಲಿ ಇರಬೇಕಾಗಿದೆ.

RELATED ARTICLES

Latest News