ನವದೆಹಲಿ,ಜ.31-ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ.
ಮಧ್ಯರಾತ್ರಿ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ ನಾನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕರೆ ಮಾಡಿದ ವ್ಯಕ್ತಿ ಶೋಧ ಕಾರ್ಯಚರಣೆ ನಡೆಸಿ ಅಂತಿಮವಾಗಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು.
ಪಾಕ್ ಮಸೀದಿ ಸ್ಪೋಟದಲ್ಲಿ ಸತ್ತವರ ಸಂಖ್ಯೆ 80ಕ್ಕೆ ಏರಿಕೆ
ಆದರೆ, ಕೊಲೆ ಬೆದರಿಕೆ ಹಾಕಿರುವ 38 ವರ್ಷದ ವ್ಯಕ್ತಿ ಮಾನಸಿಕ ಅಸ್ವಸ್ಥನೆಂದು ತಿಳಿದ ನಂತರ ಆತನಿಗೆ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
Delhi, CM, Arvind Kejriwal, receives, death, threat,