ನವದೆಹಲಿ:.ಜ.4- ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ. ಅವರು ಇಂದು ಬೆಳಿಗ್ಗೆ ಟ್ವೀಟ್ ಮಾಡಿ ವಿಷಯ ಖಚಿತಪಡಿಸಿದ್ದಾರೆ. ರೋಗ ಲಕ್ಷಣ ಕಾಣಿಸಿಕೊಂಡ ತಕ್ಷಣ ಅವರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದಾರೆ.
ಇಂದು ಬೆಳೆಗ್ಗೆ ವರದಿ ಬಂದಿದ್ದು ಸೋಂಕು ತಗುಲಿದೆ ಎಚ್ಚರಿಕೆ ವಹಿಸುವಂತೆ ಆರೋಗ್ಯ ಅಕಾರಿಗಳು ಸಲಹೆ ನೀಡಿದ್ದಾರೆ. ಕೇಜ್ರಿವಾಲ್ ಆವರು ಮನೆಯಲ್ಲಿ ತಮ್ಮನ್ನು ತಾವು ಪ್ರತ್ಯೇಕಿಸಿಕೊಂಡಿದ್ದಾರೆ. ಕಳೆದ ಮೂರು ದಿನಗಳಲ್ಲಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಚುನಾವಣಾ ಪ್ರಚಾರ ಬೃಹತ್ ರ್ಯಾಲಿಗಳನ್ನು ಪಾಲ್ಗೊಂಡಿದ್ದರು.
ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪರೀಕ್ಷಿಸಿಕೊಳ್ಳಿ ,ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿದ್ದಾರೆ.ವಿಷಯ ತಿಳಿದು ಕೆಲ ನಾಯಕರು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದಾರೆ ವೈದ್ಯರು ಚಿಕಿತ್ಸೆ ನೀಡಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
