Wednesday, August 20, 2025
Homeರಾಷ್ಟ್ರೀಯ | Nationalದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

Delhi CM Rekha Gupta assaulted during ‘Jan Sunwai’ programme, alleges BJP

ನವದೆಹಲಿ, ಆ.20-ಇಂದು ಬೆಳಿಗ್ಗೆ ಮನವಿ ಪತ್ತ ಸಲ್ಲಿಸಲು ಬಂದ ವ್ಯಕ್ತಿಯೊಬ್ಬ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ ನಡೆಸಿದ್ದಾನೆ.ಇಲ್ಲಿನ ಸಿವಿಲ್‌ ಲೈನ್‌್ಸನಲ್ಲಿರುವ ಅಧಿಕೃತ ನಿವಾಸದಲ್ಲಿ ನಡೆದ ಜನ್‌ ಸುನ್ವೈ ಕಾರ್ಯಕ್ರಮದ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ ನಡೆದಿದೆ ಎಂದು ಬಿಜೆಪಿ ತಿಳಿಸಿದೆ.

ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸಾರ್ವಜನಿಕ ಮನವಿ ವಿಚಾರಣೆಯ ಸಮಯದಲ್ಲಿ ಅವರು ಮೊದಲು ಸುಮಾರು 35 ವರ್ಷದ ವ್ಯಕ್ತಿ ಸಿಎಂಗೆ ಕೆಲವು ದಾಖಲೆಗಳನ್ನು ನೀಡಿದರು ಮತ್ತು ನಂತರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಹೇಳಿದರು. ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಮುಖ್ಯಮಂತ್ರಿಯ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.

RELATED ARTICLES

Latest News