ತೇಜಸ್ವಿ ಯಾದವ್ ಜಾಮೀನು ರದ್ದುಪಡಿಸಲು ನ್ಯಾಯಾಲಯ ನಿರಾಕರಣೆ

Social Share

ನವದೆಹಲಿ,ಅ.18- ರೈಲ್ವೆಯ ಐಆರ್‌ಸಿಟಿಸಿ ಹಗರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಲು ಸಿಬಿಐನ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ನ್ಯಾಯಾೀಧಿಶರಾದ ಗೀತಾಂಜಲಿ ಗೋಯಲ್ ಅವರು ಸಿಬಿಐನ ಮನವಿಯನ್ನು ತಿರಸ್ಕರಿಸಿದ್ದಾರೆ. ಅದೇ ಸಮಯದಲ್ಲಿ ತೇಜಸ್ವಿ ಯಾದವ್ ಪ್ರತಿ ಪದ ಬಳಕೆಯಲ್ಲೂ ಎಚ್ಚರಿಕೆ ವಹಿಸುವಂತೆ ತಾಕೀತು ಮಾಡಿದ್ದಾರೆ.

ತೇಜಸ್ವಿ ಯಾದವ್ ಅವರ ಇತ್ತೀಚಿನ ಪತ್ರಿಕಾಗೊಷ್ಟಿಯನ್ನು ನ್ಯಾಯಾಲಯದ ಮುಂದೆ ಪ್ರಸ್ತಾಪಿಸಿದ ಸಿಬಿಐ ಜಾಮೀನಿನ ಸ್ವಾತಂತ್ರವನ್ನು ತೇಜಸ್ವಿ ಯಾದವ್ ದುರುಪಯೋಗಪಡಿಸಿಕೊಂಡಿದ್ದಾರೆ. ಹೀಗಾಗಿ ತನಿಖೆಗೆ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿತ್ತು.

ಈ ವೇಳೆ ತೇಜಸ್ವಿ ಯಾದವ್ ಪರವಾಗಿ ವಾದಿಸಿದ ವಕೀಲರು ಕೇಂದ್ರ ಸರ್ಕಾರ ಸಿಬಿಐ, ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು. ಹೀಗಾಗಿ ಎಚ್ಚರಿಕೆ ನೀಡಿದ ನ್ಯಾಯಾಲಯ, ಯಾದವ್ ಅವರಿಂದ ತಪ್ಪುಗಳಾಗಿವೆ. ಜಾಮೀನು ಷರತ್ತು ಉಲ್ಲಂಘನೆಯಾಗಿದೆ ಎಂದು ಭಾವಿಸಬೇಕಿಲ್ಲ ಎಂದಿದೆ.

ಐಆರ್‍ಸಿಟಿಸಿ ಕಾರ್ಯ ನಿರ್ವಹಣೆಯಲ್ಲಿ ಲೋಪಗಳಾಗಿವೆ ಎಂದು ಸಿಬಿಐ ತನಿಖೆ ನಡೆಸಲಾಗುತ್ತಿದ್ದು, ಅದರಲ್ಲಿ ತೇಜಸ್ವಿ ಯಾದವ್ ಅವರನ್ನು ಆರೋಪಿ ಮಾಡಲಾಗಿದೆ. ನ್ಯಾಯಾಲಯ ತೇಜಸ್ವಿ ಅವರ ವಿರುದ್ಧ ಜಾರಿಗೊಳಿಸಲಾಗಿದ್ದ ಸಮನ್ಸ್‍ಗೆ 2018ರ ಅಕ್ಟೋಬರ್‍ನಲ್ಲಿ ತಡೆಯಾಜ್ಞೆ ನೀಡಿತ್ತು.

Articles You Might Like

Share This Article