ನವದೆಹಲಿ,ಡಿ.5- ದಕ್ಷಿಣ ದೆಹಲಿಯ ನೆಬ್ ಸರಾಯ್ನಲ್ಲಿ ನಡೆದ ದಂಪತಿ ಮತ್ತು ಅವರ ಮಗಳ ಭೀಕರ ಹತ್ಯೆ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಭೇದಿಸಿದ್ದಾರೆ. ದಂಪತಿಯ
ಪುತ್ರನೇ ಹತ್ಯೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಹತ್ಯೆಯಾದ ದಂಪತಿಯ ಪುತ್ರ ಅರ್ಜುನ್ನನ್ನು (20) ಪೊಲೀಸರು ಬಂಧಿಸಿದ್ದಾರೆ. ಆತ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ.
ತನ್ನ ಇಡೀ ಕುಟುಂಬವು ಮಲಗಿರುವಾಗ ಕೊಲೆ ಮಾಡಿದ್ದಾನೆ, ರಾಜೇಶ್ ಕುಮಾರ್ (51), ಅವರ ಪತ್ನಿ ಕೋಮಲ್ (46) ಮತ್ತು ಅವರ 23 ವರ್ಷದ ಮಗಳು ಕವಿತಾ ಅವರ ಶವಗಳು ನೆಬ್ ಸರೈನಲ್ಲಿರುವ ಅವರ ಮನೆಯಲ್ಲಿ ನಿನ್ನೆ ಬೆಳಗ್ಗೆ ಪತ್ತೆಯಾಗಿತ್ತು.ತಂದೆ ತನಗೆ ಅವಮಾನ ಮಾಡಿದ್ದರು, ಜತೆಗೆ ಅಷ್ಟೂ ಆಸ್ತಿಯನ್ನು ತನ್ನ ಸಹೋದರಿಗೆ ನೀಡುವುದಾಗಿ ಹೇಳಿದ್ದರು, ಹಾಗಾಗಿ ಅವರ ಮದುವೆ ವಾರ್ಷಿಕೋತ್ಸವದಂದೇ ಅವರನ್ನು ಕೊಲೆ ಮಾಡಲು ನಿರ್ಧರಿಸ್ದೆಿ ಎಂದು ಆತ ಬಾಯ್ಬಿಟ್ಟಿದ್ದಾನೆ.
ರಾಜೇಶ್ ಮತ್ತು ಕೋಮಲ್ ಅವರ ಮಗ ಅರ್ಜುನ್, 20, ಅವರು ಬೆಳಿಗ್ಗೆ 5.30 ರ ಸುಮಾರಿಗೆ ಬೆಳಗಿನ ವಾಕಿಂಗ್ಗೆ ತೆರಳಿದ್ದರು ಮತ್ತು ಹಿಂದಿರುಗಿದಾಗ ಶವಗಳು ಪತ್ತೆಯಾಗಿತ್ತು ಎಂದು ಹೇಳಿದ್ದರು. ಆದರೆ ಮನೆಯಲ್ಲಿ ಕಳ್ಳತನವಾಗಿಲೀ ಯಾವುದೂ ನಡೆದಿರಲಿಲ್ಲ.
ರಾಜೇಶ್, ಕೋಮಲ್ ಮತ್ತು ಕವಿತಾ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಅಕ್ಕಪಕ್ಕದ ಮನೆಯವರು ಹೇಳಿದ್ದಾರೆ. ಮೃತದೇಹಗಳು ಪತ್ತೆಯಾದ ನಂತರ, ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು, ಇದು ಕುಟುಂಬದ ಹೊರಗಿನವರು ಯಾರೂ ಮನೆಗೆ ಪ್ರವೇಶಿಸಿಲ್ಲ ಎಂದು ಅವರಿಗೆ ಮನವರಿಕೆಯಾಯಿತು.
ಅರ್ಜುನ್ನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ತನಿಖೆ ಬಳಿಕ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದರು. ಅರ್ಜುನ್ ತಮ ಶಾಲಾ ಶಿಕ್ಷಣವನ್ನು ಧೌಲಾ ಕುವಾನ್ನ ಆರ್ಮಿ ಪಬ್ಲಿಕ್ ಸ್ಕೂಲ್ನಲ್ಲಿ ಮಾಡಿದ್ದ. ದೆಹಲಿ ವಿಶ್ವವಿದ್ಯಾಲಯದಲ್ಲಿ ಎರಡನೇ ವರ್ಷದ ಬ್ಯಾಚುಲರ್ ಆಫ್ ಆರ್ಟ್‌್ಸ ವಿದ್ಯಾರ್ಥಿಯಾಗಿದ್ದಾರೆ.
ತಂದೆ ನಿವೃತ್ತ ಸೈನಿಕರಾಗಿದ್ದು, ಓದಿನ ವಿಚಾರದಲ್ಲಿ ಪದೇ ಪದೆ ಗದರುತ್ತಿದ್ದರು. ಸ್ವಲ್ಪ ದಿನಗಳ ಹಿಂದೆ ಅಕ್ಕಪಕ್ಕದ ಮನೆಯವರ ಮುಂದೆ ಅರ್ಜುನ್ಗೆ ಥಳಿಸಿದ್ದರು. ಅದಕ್ಕೆ ಕೋಪಗೊಂಡು ಎಲ್ಲರನ್ನೂ ಹತ್ಯೆ ಮಾಡಿದ್ದಾನೆ. ಹರ್ಯಾಣ ಮೂಲದ ಕುಟುಂಬವು 15 ವರ್ಷಗಳ ಹಿಂದೆ ದೆಹಲಿಗೆ ಬಂದಿತ್ತು.
ಏನಿದು ಪ್ರಕರಣ? :
ರಾಜೇಶ್ ಕುಮಾರ್ (51), ಅವರ ಪತ್ನಿ ಕೋಮಲ್ (46) ಮತ್ತು ಅವರ ಮಗಳು ಕವಿತಾ (23) ಅವರ ಶವಗಳು ನೆಬ್ ಸರೈನಲ್ಲಿರುವ ಅವರ ಮನೆಯಲ್ಲಿ ನಿನ್ನೆ ಬೆಳಿಗ್ಗೆ ಪತ್ತೆಯಾಗಿದ್ದವು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಅರ್ಜುನ್, ಅಪ್ಪ, ಅಮ ತಮ 27ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದರು. ತಾನು ಮುಂಜಾನೆ 5.30ರ ಸುಮಾರಿಗೆ ಪೋಷಕರಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ಹೇಳಿ ವಾಕಿಂಗ್ ಹೋಗ್ದೆಿ. ಈ ಸಂದರ್ಭದಲ್ಲಿ ಕೊಲೆ ನಡೆದಿದೆ ಎಂದು ಕತೆ ಕಟ್ಟಿದ್ದ.
ಪ್ರಕರಣ ಸಂಬಂಧ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು.
ಈ ವೇಳೆ ಕುಟುಂಬದ ಹೊರಗಿನವರು ಯಾರೂ ಮನೆಗೆ ಪ್ರವೇಶಿಸಿಲ್ಲ ಎಂಬುದು ತಿಳಿದು ಬಂದಿದೆ. ಅಲ್ಲದೇ ಮನೆಯಲ್ಲಿ ಕಳ್ಳತನ ನಡೆದಿರಲಿಲ್ಲ. ಅರ್ಜುನ್ನ ಹೇಳಿಕೆಗಳು ಅನುಮಾನಾಸ್ಪದವಾಗಿರುವುದನ್ನು ಗಮನಿಸಿ, ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.