ನವದೆಹಲಿ, ಜು.3 ಕೆಲಸಗಾರನೇ ತಾಯಿ ಹಾಗೂ ಮಗನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ಲಜ್‌ಪತ್ ನಗರದಲ್ಲಿ ನಡೆದಿದೆ.ಕೊಲೆಯಾದ ದುರ್ದೈವಿಗಳನ್ನು ತಾಯಿ ರುಚಿಕಾ (42) ಹಾಗೂ ಮಗ ಕ್ರಿಶ್ (14) ಎಂದು ಗುರುತಿಸಲಾಗಿದೆ.
ತಾಯಿ-ಮಗನನ್ನು ಕೊಲೆ ಮಾಡಿದ ಕೊಲೆಪಾತಕ ಮುಖೇಶ್ (24) ನನ್ನು ಪೊಲೀಸರು ಬಂಧಿಸಿದ್ದಾರೆ.ರುಚಿಕಾ ಹಾಗೂ ಆಕೆಯ ಪತಿ ಬಟ್ಟೆ ಅಂಗಡಿಯೊಂದನ್ನು ನಡೆಸುತ್ತಿದ್ದರು. ಇದೇ ಅಂಗಡಿಯಲ್ಲಿ ಆರೋಪಿ ಮುಖೇಶ್ ಚಾಲಕ ಹಾಗೂ ಸಹಾಯನಾಗಿ ಕೆಲಸ ಮಾಡುತ್ತಿದ್ದ.
ಕೊಲೆ ನಡೆದ ದಿನ ಆರೋಪಿ ಮುಖೇಶ್ ಮನೆಗೆ ಬಂದಿದ್ದ. ಈ ವೇಳೆ ರುಚಿಕಾ ಆತನಿಗೆ ಬೈದಿದ್ದಳು ಎನ್ನಲಾಗಿದ್ದು, ಇದೇ ಕೋಪದಿಂದ ಆಕೆ ಹಾಗೂ ಮಗನನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ರುಚಿಕಾ ಪತಿ ಕುಲದೀಪ್ ಮಾತನಾಡಿ, ನನ್ನ ಹೆಂಡತಿ ಹಾಗೂ ಮಗನಿಗೆ ನಿರಂತರವಾಗಿ ಕರೆ ಮಾಡಿದ್ದು, ಅವರು ಉತ್ತರಿಸಿರಲಿಲ್ಲ.
ಅದೇ ಗಾಬರಿಯಿಂದ ಮನೆಯ ಬಳಿ ಬಂದಾಗ ಬಾಗಿಲು ಲಾಕ್ ಆಗಿತ್ತು ಹಾಗೂ ಮೆಟ್ಟಿಲು, ನೆಲದ ಮೇಲೆ ರಕ್ತದ ಕಲೆ ಇತ್ತು. ತಕ್ಷಣವೇ ನಾನು ಪೊಲೀಸರಿಗೆ ಕರೆ ಮಾಡಿದೆ ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಈ ವೇಳೆ ಪತ್ನಿ ರುಚಿತಾಳ ಮೃತದೇಹ ಬೆಡ್ ರೂಮ್‌ನಲ್ಲಿ ಹಾಗೂ ಮಗನ ಮೃತದೇಹ ಬಾತ್‌ರೂಮ್‌ನಲ್ಲಿ ಪತ್ತೆಯಾಗಿದೆ.
ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಎರಡು ದೇಹಗಳ ಮೇಲೆಯೂ ಮಾರಣಾಂತಿಕ ಹಲ್ಲೆ ಇರುವುದು ಪತ್ತೆಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ