Wednesday, January 8, 2025
Homeರಾಷ್ಟ್ರೀಯ | Nationalದೆಹಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ದೆಹಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Delhi Elections 2025 Date Announcement


ನವದೆಹಲಿ : ಆಡಳಿತರೂಢ ಆಮ್ ಆದ್ಮೀ ಪಕ್ಷ ( ಎಎಪಿ) ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿರುವ ರಾಷ್ಟ್ರ ರಾಜಧಾನಿ ನವದೆಹಲಿಯ70 ವಿಧಾನಸಭಾ ಕ್ಷೇತ್ರಗಳಿಗೆ ಫೆ 5 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಫೆ 8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿರುವ ಈ ಚುನಾವಣೆ ಪ್ರಮೂಖವಾಗಿ ಮೂರು ರಾಜಕೀಯ ಪಕ್ಷಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲು ಕಂಡಿರುವ ಕಾಂಗ್ರೆಸ್ ನೇತೃತ್ವದ ಇಚಿಡಿ ಮೈತ್ರಕೂಟ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಆದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ಆಮ್‍ಆದ್ಮಿ ಘೋಷಣೆ ಮಾಡಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ.70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಾದ ಹಿನ್ನಲೆಯಲ್ಲಿ ಸೋಮವಾರ ಭಾರತೀಯ ಮುುುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದರು.

ತಕ್ಷಣವೇ ದೆಹಲಿಯಲ್ಲಿ ಮಾದರಿ ನೀತಿ ಸಂಹಿತಿ ಜಾರಿಯಾಗಿದ್ದು, ಇನ್ನು ಮುಂದೆ ಯಾವುದೇ ರಾಜಕೀಯ ಪಕ್ಷಗಳು ಮತದಾರರಿಗೆ ಅಮಿಷವೊಡ್ಡುವ ಇಲ್ಲವೇ ಆಶ್ವಾಸನೆಗಳನ್ನು ನೀಡುವುದಕ್ಕೆ ಆಯೋಗ ಕಟ್ಟುನಿಟ್ಟಾಗಿ ನಿಷೇಧ ಮಾಡಿದೆ.ದೆಹಲಿಯಲ್ಲಿ ಈ ಬಾರಿ ಒಟ್ಟ್ಟು 1.55 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ ಪುರುಷರು 83.49 ಲಕ್ಷ, 71.74 ಲಕ್ಷ ಮಹಿಳೆಯರು, 25.89 ಲಕ್ಷ (20-29) ಯುವ ಮತದಾರರು. ಮೊದಲ ಬಾರಿಯ ಮತದಾರರು 2.08 ಲಕ್ಷ. ಅಂಗವಿಕಲರು 79,436, 100 ವರ್ಷ ಮೀರಿದ 830, ತೃತೀಯ ಲಿಂಗಿಗಳು 1,261, 85 + ವಯಸ್ಸಿನ 1.09 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ.

85 ವರ್ಷ ಮೇಲ್ಪಟ್ಟ ಮತದಾರರು ಮತ್ತು ದಿವ್ಯಾಂಗರು ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವಿರುತ್ತದೆ. ಮತದಾನದ ಅನುಕೂಲಕ್ಕಾಗಿ ಮತದಾನ ಕೇಂದ್ರಗಳಲ್ಲಿ ಸ್ವಯಂಸೇವಕರು, ಗಾಲಿಕುರ್ಚಿಗಳು ಮತ್ತು ರ್ಯಾಂಪ್‍ಗಳನ್ನು ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.ಚುನಾವಣಾ ಪ್ರಚಾರದಲ್ಲಿ ಭಾಷೆಯ ಬಗ್ಗೆ ಕಾಳಜಿ ವಹಿಸಿ. ಮಹಿಳೆಯರ ವಿರುದ್ಧ ಅಸಭ್ಯ ಭಾಷೆ ಬಳಸಬೇಡಿ ಎಂದು ಹೇಳಿದ್ದಾರೆ. ಮತ ಎಣಿಕೆಗೆ ಇವಿಎಂ ಸಂಪೂರ್ಣ ಸುರಕ್ಷಿತವಾಗಿದೆ, ಇವಿಎಂ ಟ್ಯಾಂಪರಿಂಗ್ ಆರೋಪಗಳು ಆಧಾರರಹಿತವಾಗಿವೆ ಎಂದರು.

ಚುನಾವಣಾ ಪ್ರಕ್ರಿಯೆಗಳ ಕುರಿತು ಹಲವು ಅನುಮಾನಗಳಿವೆ. ಇವುಗಳಿಗೆ ದೆಹಲಿ ಚುನಾವಣೆ ಮೂಲಕ ಮತ್ತೆ ಉತ್ತರ ನೀಡಲಾಗುತ್ತದೆ. 5 ಗಂಟೆಯ ಬಳಿಕ ಮತದಾನ ಪ್ರಮಾಣ ಹೆಚ್ಚಾಗುತ್ತದೆ, ಇವಿಎಂ ಬಗ್ಗೆಯೂ ಹಲವು ಅನುಮಾನ ವ್ಯಕ್ತಪಡಿಸಲಾಗುತ್ತಿದೆ. 2024ರ ಲೋಕಸಭೆ ಚುನಾವಣೆ ಬಳಿಕ ಈ ಮಾದರಿ ಎಲ್ಲಾ ಗೊಂದಲಗಳನ್ನು ಬಗೆಹರಿಸಲಾಗಿದೆ ಎಂದು ವದಂತಿಗಳಿಗೆ ತೆರೆ ಎಳೆದರು.ಆಮ್ ಆದ್ಮಿ ಪಕ್ಷ ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಜೊತೆಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ದೆಹಲಿಯಲ್ಲಿ ಒಟ್ಟು ವಿಧಾನಸಭಾ ಕ್ಷೇತ್ರಗಳು 70. ಇವುಗಳಲ್ಲಿ ಸಾಮಾನ್ಯ 58, ಎಸ್ಸಿ 12. ಪ್ರಸ್ತುತ ಇರುವ ವಿಧಾನಸಭೆಯ ಅವಧಿ 23, 2025ರಂದು ಮುಕ್ತಾಯಗೊಳ್ಳಲಿದೆ.

ಒಟ್ಟು ಮತಗಟ್ಟೆಗಳು 13,033. 2697 ಪ್ರದೇಶಗಳಲ್ಲಿ ಇವುಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಇವುಗಳಲ್ಲಿ ನಗರ ಪ್ರದೇಶ 13,033. ಪ್ರತಿ ಮತಗಟ್ಟೆಗೆ 1191 ಮತದಾರರು ಇರಲಿದ್ದಾರೆ. ಮಹಿಳೆಯರು 70, ಅಂಗವಿಕಲರು 70 ಮತಗಟ್ಟೆಗಳನ್ನು ನಿರ್ವಹಣೆ ಮಾಡಲಿದ್ದಾರೆ.ಚುನಾವಣಾ ಪ್ರಕ್ರಿಯೆ, ಮತದಾನ ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ವೈರಸ್ ಬಳಕೆ ಮಾಡಿಕೊಂಡು ಇವಿಎಂ ಹ್ಯಾಕ್ ಮಾಡಲು ಸಾಧ್ಯವಿಲ್ಲ. ಇದನ್ನು ಪದೇ ಪದೇ ಹೇಳಲಾಗುತ್ತಿದೆ. ಮತ್ತೆ ಮತ್ತೆ ಸ್ಪಷ್ಟನೆಗಳನ್ನು ನೀಡಲಾಗುತ್ತದೆ ಎಂದು ರಾಜೀವ್ ಕುಮಾರ್ ಸ್ಪಷ್ಟಪಡಿಸಿದರು.

ಪಾರದರ್ಶಕ ಚುನಾವಣೆ ನಡೆಸುವುದು ನಮ್ಮ ಜವಾಬ್ದಾರಿ, ಕರ್ತವ್ಯ. ಸಂಜೆ 6 ಗಂಟೆಯ ಬಳಿಕ ಮತಗಟ್ಟೆ ಹೊರಗೆ ನಿಂತ ಎಲ್ಲರಿಗೂ ಟೋಕನ್ ವಿತರಣೆ ಮಾಡಿ ಅವರ ಮತಗಳನ್ನು ಪಡೆದು, ಮತದಾನವನ್ನು ಮುಕ್ತಾಯ ಮಾಡಲಾಗುತ್ತದೆ ಎಂದು ರಾಜೀವ್ ಕುಮಾರ್ ಹೇಳಿದರು.ಎಎಪಿ ಪಕ್ಷ ದೆಹಲಿ ವಿಧಾನಸಭೆ ಚುನಾವಣೆಗೆ ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲು ಸೇರಿ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ.

ಬಿಜೆಪಿ 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎಎಪಿ ತೊರೆದು ಬಿಜೆಪಿ ಸೇರಿದ್ದ ಕೈಲಾಶ್ ಗೆಹ್ಲೋಟ್ ಬಿಜವಸನ್ನಿಂದ ಸ್ಪರ್ಧಿಸುತ್ತಿದ್ದಾರೆ. ಪಟೇಲ್ ನಗರದಿಂದ ರಾಜ್ ಕುಮಾರ್, ದೆಹಲಿಯ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದ್ ಸಿಂಗ್ ಲವ್ಲಿ ಗಾಂಧಿ ನಗರದಿಂದ ಸ್ಪರ್ಧಿಸಲಿದ್ದಾರೆ.ಕಾಂಗ್ರೆಸ್ 48 ಅಭ್ಯರ್ಥಿಗಳನ್ನು ಘೋಷಿಸಿದ್ದು, ಮತ್ತೊಂದು ಪಟ್ಟಿ ಹೊರಬೇಕಿದೆ. ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಮಗ ಸಂದೀಪ್ ದೀಕ್ಷಿತ್ ಈ ಬಾರಿ ವಿಧಾನಸಭಾ ಚುನಾವಣೆಗೆ ಇಳಿಯಲಿದ್ದಾರೆ. ಈ ಹಿಂದೆ ಎರಡು ಬಾರಿ ಸಂಸದರಾಗಿದ್ದ ದೀಕ್ಷಿತ್ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. 2013 ಮತ್ತ 2015ರಲ್ಲಿ ಕೇಜ್ರಿವಾಲ್ ಅವರು ಶೀಲಾ ದೀಕ್ಷಿತ್ ವಿರುದ್ದ ಜಯ ಸಾಧಿಸಿದ್ದರು.

ಬಿಜೆಪಿ ಬೃಹತ್ ಪ್ರಚಾರವನ್ನು ನಡೆಸುತ್ತಿದ್ದು ಪ್ರಧಾನಿ ಮೋದಿ ಪ್ರಚಾರದ ಮೂಲಕ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತಾರೂಢ ಎಎಪಿಯ ಭದ್ರಕೋಟೆ ಎಂದು ಪರಿಗಣಿಸಲಾದ ನಗರಗಳಲ್ಲಿ ನೆಲೆಯೂರಲು ಸಿದ್ಧತೆಯನ್ನು ನಡೆಸಿದೆ.ಬಿಜೆಪಿಯು 1998 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗುಳಿದಿದ್ದು, 2015 ರಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಎಎಪಿಯನ್ನು ಸೋಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಎಎಪಿ 2015 ಮತ್ತು 2020ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಏರಿತ್ತು.

ಬಿಜೆಪಿಯು 1998 ರಿಂದ ದೆಹಲಿಯಲ್ಲಿ ಅಧಿಕಾರದಿಂದ ಹೊರಗುಳಿದಿದ್ದು, 2015 ರಿಂದ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಹೊಂದಿರುವ ಎಎಪಿಯನ್ನು ಸೋಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಎಎಪಿ 2015 ಮತ್ತು 2020ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಕ್ರಮವಾಗಿ 67 ಮತ್ತು 62 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಏರಿತ್ತು.ಈಗಾಗಲೇ ದೆಹಲಿ ವಿಧಾನಸಭಾ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷ ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಜೊತೆಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ) ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಫೆಬ್ರವರಿಯಲ್ಲಿ ನಡೆಯಲಿರುವ 70 ಸದಸ್ಯರ ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗುವ ಮೊದಲೇ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಬೃಹತ್ ಪ್ರಚಾರವನ್ನು ನಡೆಸುತ್ತಿದ್ದ ಪ್ರಧಾನಿ ಮೋದಿ ಪ್ರಚಾರದ ಮೂಲಕ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತಾರೂಢ ಎಎಪಿಯ ಭದ್ರಕೋಟೆ ಎಂದು ಪರಿಗಣಿಸಲಾದ ನಗರಗಳಲ್ಲಿ ನೆಲೆಯೂರಲು ಸಿದ್ಧತೆಯನ್ನು ನಡೆಸಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಫೆಬ್ರವರಿ 2020 ರಲ್ಲಿ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಪ್ರಬಲ ವಿಜಯದೊಂದಿಗೆ 62 ಸ್ಥಾನಗಳನ್ನು ಗಳಿಸುವ ಮೂಲಕ ಎರಡನೇ ಬಾರಿಗೆ ಇತಿಹಾಸವನ್ನು ನಿರ್ಮಿಸಿತು. ಎಎಪಿಯ ಯಶಸ್ಸಿನ ಪ್ರಮಾಣ ಹೇಗಿತ್ತು ಅಂದರೆ ಬಿಜೆಪಿಗೆ ಕೇವಲ ಏಕ-ಅಂಕಿಯ ಪ್ರಾತಿನಿಧ್ಯವನ್ನು ನೀಡಿತು. ಕಾಂಗ್ರೆಸ್ ಯಾವುದೇ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲೇ ಇಲ್ಲ.
ಕಾಂಗ್ರೆಸ್ ಮತ್ತು ಎಎಪಿ ಪ್ರತ್ಯೇಕವಾಗಿ ಸ್ಪರ್ಧೆ ಚುನಾವಣೆ ದಿನಾಂಕ ಘೋಷಣೆಯಾದ ನಂತರ ದೆಹಲಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.

ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಇದು 2015 ಮತ್ತು 2020ರ ಚುನಾವಣೆಗಳಲ್ಲಿ 67 ಮತ್ತು 62 ಸ್ಥಾನಗಳೊಂದಿಗೆ ಗೆದ್ದಿತ್ತು. ಕಳೆದ ಎರಡು ವಿಧಾನಸಭೆಗಳಲ್ಲಿ ಬಿಜೆಪಿ 10 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ಬಾರಿ ದೆಹಲಿಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಪೋಟಿ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ಒಟ್ಟಿಗೆ ಸ್ಪರ್ಧಿಸಿದ್ದವು, ಆದರೀಗ ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

ಅಪಾಯದಲ್ಲಿದೆ ಕೇಜ್ರಿವಾಲ್ ವಿಶ್ವಾಸ
ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಬಾರಿಯೂ ಹೊಸದಿಲ್ಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್ನ ಸಂದೀಪ್ ದೀಕ್ಷಿತ್ ಮತ್ತು ಬಿಜೆಪಿಯ ಪ್ರವೇಶ್ ವರ್ಮಾ ಅವರೊಂದಿಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಸ್ಟಾರ್ ನಾಯಕರನ್ನು ಕಣಕ್ಕಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೋರಾಟ ರೋಚಕ ತಿರುವು ಪಡೆದುಕೊಂಡಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಅತಿಶಿ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅವರು ಕಾಂಗ್ರೆಸ್ನ ಅಲ್ಕಾ ಲಂಬಾ ಮತ್ತು ದಕ್ಷಿಣ ದೆಹಲಿಯ ಬಿಜೆಪಿ ಮಾಜಿ ಸಂಸದ ರಮೇಶ್ ಬಿಧುರಿ ಅವರಿಂದ ಸ್ಪರ್ಧೆ ಎದುರಿಸುತ್ತಿದ್ದಾರೆ.

ಒಟ್ಟು ವಿಧಾನಸಭಾ ಕ್ಷೇತ್ರಗಳು : 70
ಮತದಾನ ನಡೆಯುವ ದಿನಾಂಕ : 5-2-2025
ಮತಗಳ ಎಣಿಕೆ : 8-5-2025
ಚುನಾವಣೆಗೆ ಅಧಿಸೂಚನೆ : 10-1-2025
ನಾಮಪತ್ರ ಸಲ್ಲಿಸಲು ಕೊನೆಯ ದಿನ : 17-1-2025
ನಾಮಪತ್ರಗಳ ಪರಿಶೀಲನೆ : 18-1-2025
ನಾಮಪತ್ರ ಹಿಂಪಡೆಯಲು ಕೊನೆಯ ದಿನ : 20-1-2025
ಒಟ್ಟು ಮತದಾರರು : 1,55,24,858

RELATED ARTICLES

Latest News