ದೆಹಲಿಯ ಎಲ್ಲ ಖಾಸಗಿ ಕಚೇರಿಗಳನ್ನು ಮುಚ್ಚಲು ಆದೇಶ

Social Share

ನವದೆಹಲಿ,ಜ.11-ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಅಂಕೆ ಮೀರುತ್ತಿದ್ದು, ಎಲ್ಲ ಖಾಸಗಿ ಕಚೇರಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಎಲ್ಲಾ ರೆಸ್ಟೋರೆಂಟ್ ಮತ್ತು ಬಾರ್‍ಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿಡಿಎಂಎ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಖಾಸಗಿ ಕಚೇರಿ, ಖಾಸಗಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಮಾಡುವಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಅಲ್ಲದೆ ಎಲ್ಲ ಬಾರ್‍ಗಳನ್ನು ಮುಚ್ಚಲು ಆದೇಶ ನೀಡಿದೆ. ಆದರೆ ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ ನೀಡಿದೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ಸೇವೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ಕಳೆದ ಒಂದು ತಿಂಗಳಿನಿಂದ ಹಂತ ಹಂತವಾಗಿ ಕೊರೊನಾ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿತ್ತು.
ಇಂದು ಡಿಡಿಎಂಎ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್‍ಗಳನ್ನು ಕೂಡ ಮುಚ್ಚಲು ಆದೇಶಿಸಿದೆ.
ಕೊರೊನಾ 2ನೇ ಅಲೆ ತೀವ್ರತೆ ಕಡಿಮೆಯಾದ ಸಂದರ್ಭದಲ್ಲಿ ಬಾರ್, ರೆಸ್ಟೋರೆಂಟ್, ಚಿತ್ರಮಂದಿರ, ವಿವಿಧ ಕಂಪನಿಗಳು ನಿಧಾನವಾಗಿ ತೆರೆದುಕೊಳ್ಳಲಾರಂಭಿಸಿದವು. ಆದರೆ ಮೂರನೇ ಅಲೆಯ ಭೀತಿ ಎದುರಾಗುವುದರ ಜೊತೆಗೆ ರೂಪಾಂತರಿ ಓಮಿಕ್ರಾನ್ ವೈರಸ್ ಕೂಡ ತನ್ನ ಕಬಂಧಬಾಹುವನ್ನು ಚಾಚುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Articles You Might Like

Share This Article