ನವದೆಹಲಿ,ಆ.18- ಬಿಜೆಪಿ ಮುಖಂಡ ಶಹನವಾಜ್ ಹುಸೇನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. 2018ರಲ್ಲಿ ಹುಸೇನ್ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ಮೂರು ತಿಂಗಳ ಒಳಗೆ ತನಿಖೆ ನಡೆಸಿ ವರದಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಮೇಲ್ನೋಟಕ್ಕೆ ಹುಸೇನ್ ಅವರ ವಿರುದ್ಧದ ಆರೋಪದಲ್ಲಿ ಹುರುಳಿರುವಂತೆ ಕಾಣುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿದೆ.
ಕಳೆದ ಜನವರಿ 2018ರಲ್ಲಿ ದೆಹಲಿ ಮೂಲದ ಮಹಿಳೆಯೊಬ್ಬರು ಕೆಳ ನ್ಯಾಯಾಲಯದಲ್ಲಿ ಪಿಟಿಷನ್ ಸಲ್ಲಿಸಿ ಹುಸೇನ್ ಅವರು ಪ್ರಾಣ ಬೆದರಿಕೆ ಹಾಕಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಹೀಗಾಗಿ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
ಅದೇ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟೆಲೇರಿದ್ದು, ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಹುಸೇನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ದೆಹಲಿ ಪೊಲೀಸರಿಗೆ ಆದೇಶಿಸಿದೆ.