ಸಂಸತ್ ಮೇಲೆ ಕೊರೋನಾ ದಾಳಿ, 400 ಸಿಬ್ಬಂದಿಗೆ ಪಾಸಿಟಿವ್..!

Social Share

ನವದೆಹಲಿ,ಜ.9- ಸುಪ್ರೀಂಕೋರ್ಟ್‍ನ ನಾಲ್ವರು ನ್ಯಾಯಮೂರ್ತಿಗಳು ಹಾಗೂ ಸಂಸತ್ ಭವನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನಿಷ್ಠ 400 ನೌಕರರಿಗೆ ಕೋವಿಡ್‍ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಕಳೆದ ಎರಡು ದಿನಗಳಿಂದ ನಡೆದ ಕೊರೋನಾ ಪರೀಕ್ಷೆಯಲ್ಲಿ 400 ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ.
ಅವರ ಸಂಪರ್ಕಗಳನ್ನು ಪರೀಕ್ಷಿಸಲು ಅಕಾರಿಗಳು ಸಿದ್ಧತೆ ನಡೆಸಿದ್ದಾರೆ.ಕಳೆದ ತಿಂಗಳು ಸಂಸತ್ತಿನ ಚಳಿಗಾಲದ ಅವೇಶನ ನಡೆದಿತ್ತು. ಆ ಸಭೆಗಳಿಂದಾಗಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಲಾಗುತ್ತಿದೆ.ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 20,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪಾಸಿಟಿವಿಟಿ ದರ ಶೇ. 19.60ಕ್ಕೇರಿದೆ.
ದೆಹಲಿಯ ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ (ಎಲ್‍ಎನ್‍ಜೆಪಿ) ಆಸ್ಪತ್ರೆಯ ವೈದ್ಯರು ಸಹ ಕೋವಿಡ್ ಸೋಂಕಿಗೆ ಒಳಗಾಗುತ್ತಿದ್ದಾರೆ. ಈವರೆಗೆ 11 ಮಂದಿ ವೈದ್ಯರಿಗೆ ಕೊರೊನಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.
ಎಲ್‍ಎನ್‍ಜೆಪಿ ಆಸ್ಪತ್ರೆಯ ನಿರ್ದೇಶಕ ಡಾ.ಸುರೇಶ್ ಕುಮಾರ್ ಮಾತನಾಡಿ, ಇದುವರೆಗೆ ನಮ್ಮ ಆಸ್ಪತ್ರೆಯ 26 ಸಿಬ್ಬಂದಿಗೆ ಸೋಂಕು ತಗುಲಿದೆ. ಇವರಲ್ಲಿ 11 ವೈದ್ಯರು ಮತ್ತು ಉಳಿದವರು ನರ್ಸಿಂಗ್ ಸಿಬ್ಬಂದಿ ಮತ್ತು ಸ್ವಚ್ಛತಾ ಕಾರ್ಯಕರ್ತರು ಸೇರಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ. ರಾಜ್ಯಾದ್ಯಂತ 7.97 ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಮತ್ತೊಂದೆಡೆ, ಮುಂಬೈನ ಸಿಬಿಐ ಕಚೇರಿಯಲ್ಲಿಯೂ ದೊಡ್ಡ ಪ್ರಮಾಣದ ಕರೋನಾ ಪ್ರಕರಣಗಳು ವರದಿಯಾಗಿವೆ.
ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‍ನಲ್ಲಿರುವ ಕಚೇರಿಯಲ್ಲಿ ಒಟ್ಟು 235 ಸಿಬ್ಬಂದಿಯನ್ನು ಪರೀಕ್ಷಿಸಲಾಗಿದ್ದು, 68 ಮಂದಿಗೆ ಪಾಸಿಟಿವ್ ಎಂದು ದೃಢಟಪಟ್ಟಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 3,000 ದಾಟಿದೆ. ಆದಾಗ್ಯೂ, ಪ್ರಸ್ತುತ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಓಮಿಕ್ರಾನ್ ಪ್ರಕರಣಗಳಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.

Articles You Might Like

Share This Article