1.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದ ತಾಪಮಾನ, ಚಳಿಗೆ ದೆಹಲಿ ಗಢ ಗಢ

Social Share

ನವದೆಹಲಿ,ಜ.8- ಚಳಿಗೆ ರಾಷ್ಟ್ರ ರಾಜಧಾನಿ ತತ್ತರಿಸಿ ಹೋಗಿದೆ. ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಏತನ್ಮಧ್ಯೆ, ದೆಹಲಿಯ ಹಲವು ನಗರಗಳಲ್ಲಿ ಕನಿಷ್ಠ 2.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಲೋ ರಸ್ತೆಯಲ್ಲಿ 2.8 ಡಿಗ್ರಿ ಸೆಲ್ಸಿಯಸ್ ಮತ್ತು ಪಾಲಂನಲ್ಲಿ 5.2 ಡಿಗ್ರಿ ಸೆಲ್ಸಿಯಸ್ ಇದೆ ಎಂದು ವರದಿಯಾಗಿದೆ.

ಇಂದು ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದು ಯಾರು ಮನೆಯಿಂದ ಹೊರಬರುತ್ತಿಲ್ಲ. ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಲಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದರ ಜತೆಗೆ ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಚಳಿ ಹೆಚ್ಚಾಗುತ್ತಲೆ ಇದ್ದು ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

ಕಾಸರಗೂಡಿನಲ್ಲಿ ಬೀಡಿ ಕಟ್ಟುತ್ತಿದ್ದ ವ್ಯಕ್ತಿ ಇಂದು ಟೆಕ್ಸಾಸ್ ಜಿಲ್ಲಾ ನ್ಯಾಯಾಧೀಶ..!

ಹವಾಮಾನ ಇಲಾಖೆಯ ಪ್ರಕಾರ, ಮಂಗಳವಾರದಿಂದ ಎರಡು ದಿನಗಳ ನಂತರ ವಾಯುವ್ಯ ಭಾರತದ ಬಯಲು ಪ್ರದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಮಂಗಳವಾರದವರೆಗೆ ಮುಂದಿನ ಮೂರು ದಿನಗಳಲ್ಲಿ ಪೂರ್ವ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಕಂಡುಬರುವುದಿಲ್ಲ ಮತ್ತು ನಂತರ ಸುಮಾರು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ.

ಸೋಮವಾರದವರೆಗೆ ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶದಲ್ಲಿ ಕನಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆಯಿದೆ ಮತ್ತು ನಂತರದ ಮೂರು ದಿನಗಳಲ್ಲಿ ಗುರುವಾರದವರೆಗೆ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂಡೋ-ಗಂಗಾ ಬಯಲು ಪ್ರದೇಶದ ಮೇಲ್ಮೈ ಬಳಿ ಚಾಲ್ತಿಯಲ್ಲಿರುವ ಲಘು ಗಾಳಿ ಮತ್ತು ಹೆಚ್ಚಿನ ತೇವಾಂಶದ ಮುಂದುವರಿಕೆಯಿಂದಾಗಿ, ಪಂಜಾಬ, ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಮೇಲೆ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜು ಮುಂದುವರಿಯುವ ಸಾಧ್ಯತೆಯಿದೆ.

ಚೀನಾದಲ್ಲಿ ಸರಣಿ ಅಪಘಾತ, 17 ಮಂದಿ ಸಾವು

ಮುಂದಿನ ಮೂರು ದಿನಗಳಲ್ಲಿ ಉತ್ತರಾಖಂಡ, ಉತ್ತರ ರಾಜಸ್ಥಾನ, ಬಿಹಾರ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅಸ್ಸಾಂ ಮತ್ತು ತ್ರಿಪುರಾದಲ್ಲಿ ತುಂಬಾ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.

Delhi, Shivers, At 1.9 Degrees, Under, Cold Wave, Fog, Delays Trains, Flights,

Articles You Might Like

Share This Article