Thursday, December 5, 2024
Homeಬೆಂಗಳೂರುಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದವನ ಬಂಧನಕ್ಕೆ ಒತ್ತಾಯ

ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದವನ ಬಂಧನಕ್ಕೆ ಒತ್ತಾಯ

Demand for arrest of man who made derogatory comments about Hindu Gods

ಬೆಂಗಳೂರು,ನ.25- ಹಿಂದೂ ದೇವರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಖಿಲ ಕರ್ನಾಟಕ ಬ್ರಾಹಣ ಮಹಾಸಭಾ ಮಹಾಲಕ್ಷ್ಮಿ ಲೇ ಔಟ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಅನ್ಯಧರ್ಮದ ಅಂಜುಮ್ ಶೇಖ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ, ಕೊಲ್ಲೂರು ಮೂಕಾಂಬಿಕೆ ಸೇರಿದಂತೆ ಹಲವು ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ್ದಾನೆ.

ಈ ರೀತಿ ದೇವರುಗಳ ಬಗ್ಗೆ ಕಮೆಂಟ್ ಹಾಕಿರುವ ಅಂಜುಮ್ಶೇಖ್ನನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕೆಂದು ಬ್ರಾಹಣ ಸಭಾದ ಉಪಾಧ್ಯಕ್ಷ ನಾಗೇಂದ್ರ ಭಟ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಈಗಾಗಲೇ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

RELATED ARTICLES

Latest News