ಆಟೋ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ಮಂಡಳಿ ರಚಿಸಲು ಆಗ್ರಹ

Social Share

ಬೆಂಗಳೂರು, ಫೆ.15- ರಾಜ್ಯದಲ್ಲಿನ ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರಿದ್ದು, ಬಡ ಮಧ್ಯಮ ವರ್ಗದ ಜನರು, ಆಟೋರಿಕ್ಷಾವನ್ನು ಅವಲಂಬಿಸಿದ್ದಾರೆ.

ಆದರೆ, ಆಟೋರಿಕ್ಷಾ ಚಾಲಕರಿಗೆ ಇಎಸ್ಐ, ಪಿಎಫ್, ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯವಿಲ್ಲ. ರಿಕ್ಷಾ ಚಾಲಕರು ಎಲ್ಲಾ ಜಾತಿ ವರ್ಗದವರು ಇದ್ದಾರೆ. ಹೀಗಾಗಿ ಅವರಿಗೆ ಪ್ರತ್ಯೇಕ ನಿಗಮ ರಚಿಸಿ ಅವರ ಕಲ್ಯಾಣಕ್ಕೆ ನೆರವಾಗಬೇಕು. ಮುಂದಿನ ಆಯವ್ಯಯದಲ್ಲಿ ಈ ವಿಚಾರ ಘೋಷಣೆ ಆಗಬೇಕು ಎಂದು ಒತ್ತಾಯಿಸಿದರು.

ಸಂಕಷ್ಟದ ಸುಳಿಯಲ್ಲಿರುವ ಈಶಾನ್ಯ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಅಧ್ಯಯನ ನಡೆಸಿ ಸೂಕ್ತ ಕ್ರಮ ವಹಿಸಬೇಕು. ಅಲ್ಲದೆ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಜತೆಗೆ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಹೊಸ ಬಸ್ ನೀಡುವ ಮೂಲಕ ಜನರಿಗೆ ಸೂಕ್ತ ಸಾರಿಗೆ ಸೌಲಭ್ಯ ಒದಗಿಸಿಕೊಡಬೇಕು. ಸಂಸ್ಥೆಯ ನೌಕರರ ವೇತನ, ಭತ್ಯೆ, ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಜತೆಗೆ ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ ವೈದ್ಯಕೀಯ ಕಾಲೇಜಿಗೆ ಕಟ್ಟಡವಿಲ್ಲ. ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಬೋಧಕರಿಲ್ಲದಂತಾಗಿದೆ. ಹೀಗಾಗಿ ಕೂಡಲೇ ಕಟ್ಟಡ ನಿರ್ಮಾಣ ಹಾಗೂ ಬೋಧಕರ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಒಂದು ವಾರದಲ್ಲಿ ಸಿಬ್ಬಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದರು.

#JagadishShettar, #Demand, #AutoDrivers, , #KarnatakaAssemblySession, #ಅಧಿವೇಶನ, ,

Articles You Might Like

Share This Article